ಬೆಂಗಳೂರು: ಸುಪ್ರೀಂ ಕೋರ್ಟ್ ತೀರ್ಪಿನಿಂದ ಆಘಾತಗೊಂಡಿರುವ ಕರ್ನಾಟಕ ರಾಜ್ಯ ಇನ್ನೂ ಚೇತರಿಸಿಕೊಂಡಿಲ್ಲ. ಇಂದು ಸಂಜೆ 6 ಗಂಟೆಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಕ್ಯಾಬಿನೆಟ್ ಸಭೆ ಕರೆದಿದ್ದಾರೆ. ಅತ್ತ ಕಾವೇರಿ ಕಣಿವೆಯಲ್ಲಿ ರೈತರು ಪ್ರತಿಭಟನೆ ಜೋರಾಗುತ್ತಿದೆ. ಇದರೊಂದಿಗೆ ರಾಜ್ಯದ ಇಂದಿನ ಇನ್ನಷ್ಟು ಮಹತ್ವದ ಸುದ್ದಿಗಳನ್ನು (Karnataka Live News) ಇಲ್ಲಿ ಗಮನಿಸಿ.
ರಾಜ್ಯದಲ್ಲಿ ವಾರಾಂತ್ಯದವರೆಗೂ ಮಳೆ ಗಸ್ತು!
ರಾಜ್ಯದಲ್ಲಿ ವಾರಾಂತ್ಯದವರೆಗೂ ಮಳೆರಾಯನ (Rain News) ಗಸ್ತು ಇರಲಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದ್ದರೆ, ಇತ್ತ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಭರ್ಜರಿ ಮಳೆಯಾಗುವ (Weather report) ಸಾಧ್ಯತೆ ಇದೆ.
Weather Report : ರಾಜ್ಯದಲ್ಲಿ ವಾರಾಂತ್ಯದವರೆಗೂ ಮಳೆ ಗಸ್ತು!
ಇಂದು ತುರ್ತು ಕ್ಯಾಬಿನೆಟ್ ಸಭೆ
ಬೆಂಗಳೂರು: ಇಂದು ಸಂಜೆ 6 ಗಂಟೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಕ್ಯಾಬಿನೆಟ್ ಸಭೆ ಕರೆಯಲಾಗಿದೆ. ಕಾವೇರಿ ನೀರು ವಿಚಾರವಾಗಿ ಮಹತ್ವದ ನಿರ್ಧಾರವನ್ನು ಇಲ್ಲಿ ಕೈಗೊಳ್ಳುವ ಸಾಧ್ಯತೆ ಇದೆ. ಈಗಾಗಲೇ ಕಾವೇರಿ ನೀರು ಬಿಡುವ ವಿಚಾರದಲ್ಲಿ ಹಿನ್ನಡೆಯಾಗಿದ್ದು, ಸುಪ್ರೀಂ ಕೋರ್ಟ್ ಕೂಡ ಪ್ರಾಧಿಕಾರದ ಅದೇಶವನ್ನೇ ಎತ್ತಿ ಹಿಡಿದಿದೆ.