ವಿಶ್ವವಾಣಿ ಪ್ರಕಾಶನದ ವತಿಯಿಂದ ಬೆಂಗಳೂರಿನ ಟೌನ್ ಹಾಲ್ನಲ್ಲಿ ಆಯೋಜನೆಯಾಗಿರುವ ಆರು ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮ ಆರಂಭಗೊಂಡಿದೆ. ಈ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಭಾಗಿಯಾಗಿದ್ದಾರೆ. ಆದರೆ, ಪುಸ್ತಕ ಲೋಕಾರ್ಪಣೆ ಮಾಡಲಿದ್ದಾರೆ ಎಂದು ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಲಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇನ್ನೂ ಆಗಮಿಸಿಲ್ಲ. ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬಾರದು ಎಂಬ ಬಗ್ಗೆ ಪ್ರಗತಿಪರರಿಂದ ಒತ್ತಡವಿತ್ತು. ಅವರ ಒತ್ತಡಕ್ಕೆ ಮಣಿದು ಸಿದ್ದರಾಮಯ್ಯ ಕಾರ್ಯಕ್ರಮದಿಂದ ದೂರ ಉಳಿದರೇ ಎಂಬ ಪ್ರಶ್ನೆ ಎದುರಾಗಿದೆ. ಅವರು ಕಾರ್ಯಕ್ರಮದ ಕೊನೆಯಲ್ಲಿ ಆಗಮಿಸಬಹುದು ಎಂಬ ಮಾತೂ ಕೇಳಿಬರುತ್ತಿದೆ.
ರ್ಯಾಪಿಡೋ ಬೈಕ್ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ; ರೈಡ್ ಮುಗಿದ ಮೇಲೂ ಕಾಟ!
ರ್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕನೊಬ್ಬ ಯುವತಿಗೆ ಲೈಂಗಿಕ ಕಿರುಕುಳ (Physical Abuse) ನೀಡಿರುವ ಘಟನೆ ಬೆಂಗಳೂರಿನಲ್ಲಿ ಶುಕ್ರವಾರ ನಡೆದಿದೆ. ಬೈಕ್ನಲ್ಲಿ ಹೋಗುವಾಗ ಚಾಲಕ ಅನುಚಿತವಾಗಿ ವರ್ತಿಸಿ, ಮಾರ್ಗ ಮಧ್ಯ ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿ ಕಿರುಕುಳ ನೀಡಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ.
Physical Abuse: ರ್ಯಾಪಿಡೋ ಬೈಕ್ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ; ರೈಡ್ ಮುಗಿದ ಮೇಲೂ ಕಾಟ!
ಭಾನುವಾರ ಈ ಜಿಲ್ಲೆಗಳಲ್ಲಿ ಸಿಕ್ಕಾಪಟ್ಟೆ ಮಳೆ
ಮುಂದಿನ 48 ಗಂಟೆಯಲ್ಲಿ ರಾಜ್ಯಾದ್ಯಂತ ಬಿರುಗಾಳಿ ಸಹಿತ ಭಾರಿ ಮಳೆಯಾಗುವ (rain News) ಎಚ್ಚರಿಕೆಯನ್ನು ಹವಾಮಾನ ಇಲಾಖೆ (weather report) ನೀಡಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.
Weather report : ಭಾನುವಾರ ಈ ಜಿಲ್ಲೆಗಳಲ್ಲಿ ಸಿಕ್ಕಾಪಟ್ಟೆ ಮಳೆ
ರಾಜ್ಯ ಸರ್ಕಾರದ ವಿರುದ್ಧ ಬೀದಿಗಿಳಿದ ಬಿಜೆಪಿ; ರಾಜ್ಯಾದ್ಯಂತ ಪ್ರತಿಭಟನೆ
ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳು, ಬಿಜೆಪಿ ಶಾಸಕರನ್ನು ಅಮಾನತುಗೊಳಿಸಿರುವ ಕ್ರಮ, ರಾಜಕೀಯ ಕಾರ್ಯಕ್ರಮಕ್ಕೆ ರಾಜ್ಯದ ಹಿರಿಯ ಐಎಎಸ್ ಅಧಿಕಾರಿಗಳ ಬಳಕೆ, ರೈತರ ಆತ್ಮಹತ್ಯೆ, ಬೆಲೆ ಏರಿಕೆ, ದುರ್ಬಲ ಕಾನೂನು-ಸುವ್ಯವಸ್ಥೆ ವಿರೋಧಿಸಿ ಬಿಜೆಪಿ ವತಿಯಿಂದ ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಶನಿವಾರ ಪ್ರತಿಭಟನೆ (BJP Protest) ನಡೆಸಲಾಯಿತು.
BJP Protest: ರಾಜ್ಯ ಸರ್ಕಾರದ ವಿರುದ್ಧ ಬೀದಿಗಿಳಿದ ಬಿಜೆಪಿ; ರಾಜ್ಯಾದ್ಯಂತ ಪ್ರತಿಭಟನೆ
ತಾಯಿ ಮನೆಯಲ್ಲಿ ನವವಿವಾಹಿತೆ ಆತ್ಮಹತ್ಯೆ
ಹಾಸನ ಜಿಲ್ಲೆಯ (Hassan News) ಸಕಲೇಶಪುರ ತಾಲೂಕಿನ ಬಂದಿಹಳ್ಳಿ ಗ್ರಾಮದಲ್ಲಿ ನವವಿವಾಹಿತೆ (Self Harming) ನೇಣಿಗೆ ಶರಣಾಗಿದ್ದಾರೆ. ನಂದಿತಾ (23) ಆತ್ಮಹತ್ಯೆ ಮಾಡಿಕೊಂಡವರು. ಸಕಲೇಶಪುರ ತಾಲೂಕಿನ ಬೆಳಗೋಡು ಹೋಬಳಿಯ ಕೂಡನಹಳ್ಳಿ ಗ್ರಾಮದ ಸೋಮಶೇಖರ್ ಜತೆಗೆ ಎರಡು ತಿಂಗಳ ಹಿಂದಷ್ಟೇ ನಂದಿತಾ ಮದುವೆಯಾಗಿದ್ದರು.
Self Harming : ಮದುವೆಯಾದ ಎರಡೇ ತಿಂಗಳಿಗೆ ತಾಯಿ ಮನೆಯಲ್ಲಿ ನವವಿವಾಹಿತೆ ಆತ್ಮಹತ್ಯೆ!
ಅಮೆರಿಕದಲ್ಲಿ 80 ಕೋಟಿ ರೂ. ವೆಚ್ಚದಲ್ಲಿ ಕಾಲಭೈರವೇಶ್ವರ ದೇಗುಲ ನಿರ್ಮಾಣ
ಆದಿಚುಂಚನಗಿರಿ ಮಠದಿಂದ (Sri Adichunchanagiri Mutt) ಅಮೆರಿಕದ ನ್ಯೂ ಜೆರ್ಸಿಯ ಫ್ರ್ಯಾಂಕ್ಲಿನ್ ಟೌನ್ ಶಿಪ್ನಲ್ಲಿ ಕಾಲಭೈರವೇಶ್ವರ ದೇಗುಲ ನಿರ್ಮಾಣ (Kalabhairaveshwara temple) ಮಾಡಲಾಗುತ್ತಿದೆ. ದೇಗುಲ ಕಾಮಗಾರಿ ಪರಿಶೀಲನೆಗಾಗಿ ಆದಿಚುಂಚನಗಿರಿ ಮಠ ಸಂಸ್ಥಾನದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ (Nirmalanandanatha Swamiji) ಅಮೆರಿಕಾ ಪ್ರವಾಸವನ್ನು ಕೈಗೊಂಡಿದ್ದಾರೆ.
ಅಮೆರಿಕದಲ್ಲಿ 80 ಕೋಟಿ ರೂ. ವೆಚ್ಚದಲ್ಲಿ ಕಾಲಭೈರವೇಶ್ವರ ದೇಗುಲ ನಿರ್ಮಾಣ