ಬೆಂಗಳೂರು: ಹಿಜಾಬ್ ನಿಷೇಧ (Hijab ban) ವಾಪಸ್ ಕುರಿತು ಸಿಎಂ ಸಿದ್ದರಾಮಯ್ಯ (cm siddaramaiah) ಹೇಳಿಕೆಯಿಂದ ಮತ್ತೆ ವಿವಾದ ಗರಿಗೆದರಿದೆ. ದಾವಣಗೆರೆಯಲ್ಲಿ ವೀರಶೈವ ಲಿಂಗಾಯತ ಮಹಾಸಭೆ ಎರಡನೇ ದಿನ ನಡೆಯುತ್ತಿದೆ. ಇದರೊಂದಿಗೆ ರಾಜ್ಯದ ಇಂದಿನ ಇನ್ನಷ್ಟು ಮಹತ್ವದ ಸುದ್ದಿಗಳನ್ನು ಇಲ್ಲಿ ಫಾಲೋ (Karnataka Live News) ಮಾಡಿ.
ಕರ್ನಾಟಕದಲ್ಲಿಂದು 106 ಕೊರೊನಾ ಪ್ರಕರಣ ಪತ್ತೆ
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 106 ಕೊರೊನಾ ಪ್ರಕರಣಗಳು (Covid 19 Cases) ಪತ್ತೆಯಾಗಿವೆ. ಇದರಿಂದ ಕೋವಿಡ್ 19 ಸಕ್ರಿಯ ಪ್ರಕರಣಗಳ ಸಂಖ್ಯೆ 344ಕ್ಕೆ ಏರಿಕೆಯಾಗಿದೆ. ಇನ್ನು ಸೋಂಕಿನಿಂದ ಗುಣಮುಖರಾಗಿ 33 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
Covid 19 Cases: ಕರ್ನಾಟಕದಲ್ಲಿಂದು 106 ಕೊರೊನಾ ಪ್ರಕರಣ ಪತ್ತೆ
ವಿಜಯೇಂದ್ರ ನೇತೃತ್ವದ ಯುವ ತಂಡ, ಪಕ್ಷ ನಿಷ್ಠೆ ಇಲ್ಲದವರಿಗೆ ಕಠಿಣ ಸಂದೇಶ
ಇನ್ನು ಕೆಲವೇ ತಿಂಗಳಲ್ಲಿ ಬರಲಿರುವ 2024ರ ಲೋಕಸಭಾ ಚುನಾವಣೆ ಹಾಗೂ ಬಳಿಕ ಬರುವ ಬಿಬಿಎಂಪಿ, ಸ್ಥಳೀಯ ಸಂಸ್ಥೆಗಳ ಚುನಾವಣೆ ದೃಷ್ಟಿಯಿಂದ ರಾಜ್ಯ ಬಿಜೆಪಿಗೆ (Karnataka BJP) ವರಿಷ್ಠರು ಮೇಜರ್ ಸರ್ಜರಿ ಮಾಡಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಜತೆ ಮೈತ್ರಿ ಮಾಡಿಕೊಂಡು 28ಕ್ಕೆ 28 ಕ್ಷೇತ್ರಗಳನ್ನು ಗೆಲ್ಲುವ ಗುರಿಯನ್ನು ಹೈಕಮಾಂಡ್ ಇಟ್ಟುಕೊಂಡಿದೆ. ಹೀಗಾಗಿ ವಿಜಯೇಂದ್ರ ಜತೆ ರಾಜ್ಯ ಬಿಜೆಪಿಯ ವಿಜಯದ ರಥ ಎಳೆಯಲು ಯುವ ಶಕ್ತಿಗೆ ಮಣೆ ಹಾಕಲಾಗಿದೆ.
Karnataka BJP: ವಿಜಯೇಂದ್ರ ನೇತೃತ್ವದ ಯುವ ತಂಡ, ಪಕ್ಷ ನಿಷ್ಠೆ ಇಲ್ಲದವರಿಗೆ ಕಠಿಣ ಸಂದೇಶ
ಆಳ್ವಾಸ್ ಹಾಸ್ಟೆಲ್‌ನ ಬಾತ್ ರೂಂನಲ್ಲಿ ನೇಣು ಬಿಗಿದುಕೊಂಡ ವಿದ್ಯಾರ್ಥಿ
ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯಲ್ಲಿ ನಡೆದಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿ ಮನೋಜ್ (18) ಆತ್ಮಹತ್ಯೆ ಮಾಡಿಕೊಂಡವನು.
Self Harming : ಹಾಸ್ಟೆಲ್‌ನ ಬಾತ್ ರೂಂನಲ್ಲಿ ನೇಣು ಬಿಗಿದುಕೊಂಡ ವಿದ್ಯಾರ್ಥಿ
ಶ್ರೀರಂಗಪಟ್ಟಣ ಜಾಮಿಯಾ ಮಸೀದಿ ಸ್ಥಳದಲ್ಲೇ ಮಂದಿರ ಕಟ್ತೇವೆ; ಹನುಮ ಭಕ್ತರ ಶಪಥ
ಹನುಮ ಜಯಂತಿ ಹಿನ್ನೆಲೆಯಲ್ಲಿ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಜಾಮಿಯಾ ಮಸೀದಿ ಸ್ಥಳದಲ್ಲಿ ಮೂಡಲ ಬಾಗಿಲು ಆಂಜನೇಯಸ್ವಾಮಿ ದೇವಾಲಯ ಪುನರ್ ಪ್ರತಿಷ್ಠಾಪನೆ ಸಂಕಲ್ಪದೊಂದಿಗೆ ಭಾನುವಾರ ಅದ್ಧೂರಿಯಾಗಿ ಹನುಮ ಸಂಕೀರ್ತನಾ ಯಾತ್ರೆ (Hanuma Sankirtana Yatra) ನಡೆಯಿತು. ಪೊಲೀಸ್ ಸರ್ಪಗಾವಲಿನಲ್ಲಿ ನಡೆದ ಸಂಕೀರ್ತನಾ ಯಾತ್ರೆಯಲ್ಲಿ ಸುಮಾರು 10 ಸಾವಿರಕ್ಕೂ ಹೆಚ್ಚು ಭಕ್ತರು ಭಾಗಿಯಾಗಿದ್ದರು.
https://vistaranews.com/karnataka/hanuma-sankirtana-yatra-held-in-srirangapatna/539995.html
ಕನ್ನಡ ನಾಮಫಲಕ ಅಳವಡಿಕೆಗೆ ಫೆ.28 ಕೊನೇ ದಿನ; ಗಡುವು ಮೀರಿದರೆ ಶಿಸ್ತು ಕ್ರಮ
ಅಂಗಡಿ-ಮುಂಗಟ್ಟು, ಮಳಿಗೆಗಳು, ಮಾಲ್‌ಗಳು ಕನ್ನಡ ನಾಮಫಲಕವನ್ನು ಕಡ್ಡಾಯವಾಗಿ (Kannada nameplate mandatory) ಅಳವಡಿಸಿಕೊಳ್ಳಬೇಕು. ಈ ನಿಯಮವನ್ನು ಉಲ್ಲಂಘಿಸಿದರೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಎಚ್ಚರಿಕೆ ನೀಡಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ವಾಣಿಜ್ಯ ಮಳಿಗೆಗಳಲ್ಲಿ ಫೆಬ್ರವರಿ 28 ರೊಳಗಾಗಿ ಶೇ. 60ರಷ್ಟು ಕನ್ನಡ ಭಾಷೆಯ ನಾಮಫಲಕಗಳನ್ನು ಅಳವಡಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದ್ದಾರೆ.
ಕನ್ನಡ ನಾಮಫಲಕ ಅಳವಡಿಕೆಗೆ ಫೆ.28 ಕೊನೇ ದಿನ; ಗಡುವು ಮೀರಿದರೆ ಶಿಸ್ತು ಕ್ರಮ