Site icon Vistara News

Karnataka live news: ರಾಮಲಿಂಗಾ ರೆಡ್ಡಿ ಸಂಧಾನಕ್ಕೆ ತಾತ್ಕಾಲಿಕ ಜಯ; ಜುಲೈ 27ರ ಖಾಸಗಿ ಸಾರಿಗೆ ಬಂದ್‌ ಮುಂದಕ್ಕೆ

high court

ಬೆಂಗಳೂರು: ರಾಜ್ಯದ ಇಂದಿನ ಪ್ರಮುಖ ಸುದ್ದಿ ಬೆಳವಣಿಗೆಗಳ ಕ್ಷಣಕ್ಷಣದ ಅಪ್‌ಡೇಟ್ಸ್‌ (Karnataka live news) ನಿಮಗೆ ಇಲ್ಲಿ ದೊರೆಯಲಿವೆ.

Prabhakar R

ತುಂಗಭದ್ರಾ ನದಿಯಲ್ಲಿ ಕೈಕಾಲು ತೊಳೆಯಲು ಹೋಗಿ ಕೊಚ್ಚಿ ಹೋದ ಯುವಕ

ತುಂಗಭದ್ರಾ ನದಿಯಲ್ಲಿ ಕೈಕಾಲು ತೊಳೆಯುವಾಗ ಯುವಕ ಕೊಚ್ಚಿ ಹೋಗಿರುವ ಘಟನೆ ಹಾವೇರಿ ಜಿಲ್ಲೆಯ ರಾಣಿಬೆನ್ನೂರು ತಾಲೂಕಿನ ಮಾಕನೂರು ಗ್ರಾಮದ ಬಳಿ ನಡೆದಿದೆ. ಮಂಜುನಾಥ ಬಸವರಾಜ ಆನಂದಿ (27) ಮೃತ. ಯುವಕನ ಮೃತದೇಹಕ್ಕಾಗಿ ಅಗ್ನಿಶಾಮಕದಳ ಶೋಧಕಾರ್ಯ ನಡೆಸುತ್ತಿದೆ. ಕುಮಾರಪಟ್ಟಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Man Drowns in River: ತುಂಗಭದ್ರಾ ನದಿಯಲ್ಲಿ ಕೈಕಾಲು ತೊಳೆಯಲು ಹೋಗಿ ಕೊಚ್ಚಿ ಹೋದ ಯುವಕ
Prabhakar R

ಬ್ರ್ಯಾಂಡ್ ಬೆಂಗಳೂರಿಗಾಗಿ ಕೆನಡಾ ಸಂಸ್ಥೆಯೊಂದಿಗೆ ರಾಜ್ಯ ಸರ್ಕಾರ ಒಪ್ಪಂದ

ಸಮಗ್ರ ಅಭಿವೃದ್ಧಿ ಮೂಲಕ ಬ್ರ್ಯಾಂಡ್‌ ಬೆಂಗಳೂರು (Brand Bangalore) ನಿರ್ಮಾಣಕ್ಕೆ ಕೆನಡಾ ಸಂಸ್ಥೆಯೊಂದಿಗೆ ರಾಜ್ಯ ಸರ್ಕಾರ ಒಪ್ಪಂದ ಮಾಡಿಕೊಂಡಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮತ್ತು ಕೆನಡಾ ಮೂಲದ ವರ್ಡ್ ಡಿಸೈನ್ ಸಂಸ್ಥೆಯ (WDO) ಅಧ್ಯಕ್ಷ ಡೇವಿಡ್ ಕುಸುಮ ಅವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಮ್ಮುಖದಲ್ಲಿ ವಿಧಾನಸೌಧದಲ್ಲಿ ಒಪ್ಪಂದಕ್ಕೆ ಸೋಮವಾರ ಸಹಿ ಹಾಕಿದರು.

Brand Bangalore: ಬ್ರ್ಯಾಂಡ್ ಬೆಂಗಳೂರಿಗಾಗಿ ಕೆನಡಾ ಸಂಸ್ಥೆಯೊಂದಿಗೆ ರಾಜ್ಯ ಸರ್ಕಾರ ಒಪ್ಪಂದ

Prabhakar R

ವರ್ಷಾಂತ್ಯಕ್ಕೆ ಜಯದೇವ ಜಂಕ್ಷನ್‌ ಇಂಟರ್‌ಚೇಂಜ್‌ ಮೆಟ್ರೋ ನಿಲ್ದಾಣ ಆರಂಭ

ಸಿಲಿಕಾನ್‌ ಸಿಟಿ ಬೆಂಗಳೂರಿನ ಅತಿ ದೊಡ್ಡ ಮೆಟ್ರೋ ನಿಲ್ದಾಣ ಎಂಬ ಹೆಗ್ಗಳಿಕೆ ಪಡೆದಿರುವ ಜಯದೇವ ಜಂಕ್ಷನ್‌ ಇಂಟರ್‌ಚೇಂಜ್‌ ಮೆಟ್ರೋ ನಿಲ್ದಾಣವು ಈ ವರ್ಷಾಂತ್ಯಕ್ಕೆ ಆರಂಭವಾಗುವ ಸಾಧ್ಯತೆ ಇದೆ. ಇದರೊಂದಿಗೆ ಹಳದಿ ಮಾರ್ಗದ ಆರ್‌.ವಿ. ರಸ್ತೆ – ಬೊಮ್ಮಸಂದ್ರ ನಿಲ್ದಾಣವರೆಗೆ ಮೆಟ್ರೋ ವಾಣಿಜ್ಯ ಸಂಚಾರ ಶುರುವಾಗಲಿದೆ. ಬನ್ನೇರುಘಟ್ಟ ರಸ್ತೆಯ ಜಯದೇವ ಜಂಕ್ಷನ್‌ನಲ್ಲಿ ನಿರ್ಮಾಣವಾಗುತ್ತಿರುವ ಬಹುಹಂತದ ಇಂಟರ್‌ಚೇಂಜ್‌ ಮೆಟ್ರೋ ನಿಲ್ದಾಣವು, ಹಳದಿ ಮತ್ತು ಗುಲಾಬಿ ಮೆಟ್ರೋ ಮಾರ್ಗಗಳನ್ನು ಸಂಪರ್ಕಿಸುತ್ತದೆ.

Namma Metro: ವರ್ಷಾಂತ್ಯಕ್ಕೆ ಜಯದೇವ ಜಂಕ್ಷನ್‌ ಇಂಟರ್‌ಚೇಂಜ್‌ ಮೆಟ್ರೋ ನಿಲ್ದಾಣ ಆರಂಭ
Adarsha Anche

HD Kumaraswamy : ಜೆಡಿಎಸ್-ಬಿಜೆಪಿ ನಡೆ ಟ್ರ್ಯಾಕ್ ಆಗುತ್ತಿದೆ ಎಂದ ಡಿಕೆಶಿ; ಸಿಎಂ ಆಗೋ ಡ್ರಾಮಾ ಎಂದ ಕೇಸರಿಪಡೆ!

ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರ ಸಿಂಗಾಪುರ ಪ್ರವಾಸ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಇದು ಸಿದ್ದರಾಮಯ್ಯ ಸರ್ಕಾರವನ್ನು ಬೀಳಿಸಲು ನಡೆಸುತ್ತಿರುವ ತಂತ್ರ ಎಂದು ಹೇಳಲಾಗುತ್ತಿದೆ. ಅಲ್ಲದೆ, ಆಪರೇಷನ್‌ ಸಿಂಗಾಪುರ ಶುರವಾಗಿದೆಯೇ ಎಂಬ ಅನುಮಾನವನ್ನೂ ವ್ಯಕ್ತಪಡಿಸಲಾಗಿದೆ. ಬಿಜೆಪಿ, ಜೆಡಿಎಸ್‌‌ ವಿರುದ್ಧ ಡಿಕೆಶಿ ಗಂಭೀರ ಆರೋಪ ಮಾಡಿದ್ದರೆ, ಇದಕ್ಕೆ ಬಿಜೆಪಿ ತಿರುಗೇಟು ಕೊಟ್ಟಿದೆ. ಇದೆಲ್ಲ ಸಿಎಂ ಆಗೋಕೆ ಡಿ.ಕೆ. ಶಿವಕುಮಾರ್‌ ಆಡುತ್ತಿರುವ ಹೊಸ ಆಟ ಎಂದು ಟೀಕೆ ಮಾಡಿದೆ.

HD Kumaraswamy : ಜೆಡಿಎಸ್-ಬಿಜೆಪಿ ನಡೆ ಟ್ರ್ಯಾಕ್ ಆಗುತ್ತಿದೆ ಎಂದ ಡಿಕೆಶಿ; ಸಿಎಂ ಆಗೋ ಡ್ರಾಮಾ ಎಂದ ಕೇಸರಿಪಡೆ!
Adarsha Anche

Rain News : ಮುಂಗಾರಿಗೆ ರಾಜ್ಯದಲ್ಲಿ 27 ಬಲಿ; ಹೈ ಅಲರ್ಟ್‌ ಇರಲು ಡಿಸಿಗಳಿಗೆ ಸೂಚಿಸಿದ ಕೃಷ್ಣ ಭೈರೇಗೌಡ

ಎಲ್ಲ ಜಿಲ್ಲೆಗಳ ಜತೆಯೂ ರಾಜ್ಯ ಸರ್ಕಾರ ನಿರಂತರ ಸಂಪರ್ಕದಲ್ಲಿದೆ. ಮಳೆ ಬಗ್ಗೆ ಮಾಹಿತಿಯನ್ನು ಪಡೆಯಲಾಗುತ್ತಿದ್ದು, ಮುಂದಿನ ವಾರ ಹೈ ಅಲರ್ಟ್‌ನಲ್ಲಿ ಇರುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ.

https://vistaranews.com/karnataka/27-dead-in-state-due-to-monsoon-says-krishna-byregowda-rain-news/409259.html

Exit mobile version