ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಸಚಿವರು ವರ್ಗಾವಣೆಗೆ ಶಾಸಕರಿಂದಲೇ ಹಣ ಕೇಳುತ್ತಿದ್ದಾರೆ ಎಂಬ ಆರೋಪವುಳ್ಳ ಪತ್ರವು ನಕಲಿ ಎಂದು ಆಳಂದ ಶಾಸಕ ಬಿ.ಆರ್. ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ. ನಾನು ಬರೆದಿರುವ ಪತ್ರವೇ ಬೇರೆ ಎಂದು ಅವರು ಹೇಳಿದ್ದಾರೆ. ಇನ್ನು ರಾಜ್ಯದೆಲ್ಲೆಡೆ ಧಾರಾಕಾರ ಮಳೆಯಾಗುತ್ತಿದೆ. ಹಲವೆಡೆ ಜನವಸತಿ ಪ್ರದೇಶಗಳಿಗೆ ನೀರು ನುಗ್ಗಿದ, ಕೆಲವೆಡೆ ಗುಡ್ಡ ಕುಸಿದ ಪ್ರಕರಣಗಳು ವರದಿಯಾಗುತ್ತಿವೆ. ಇದರೊಂದಿಗೆ ಇನ್ನಷ್ಟು ರಾಜ್ಯದ ಪ್ರಮುಖ ಸುದ್ದಿ ಬೆಳವಣಿಗೆಗಳ (Karnataka live news) ಕ್ಷಣಕ್ಷಣದ ಮಾಹಿತಿಗಾಗಿ ಇಲ್ಲಿ ನೋಡಿ.
ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಅವ್ಯವಸ್ಥೆ; ಎಂಜಿನಿಯರ್ ಅಮಾನತಿಗೆ ಸಿಎಂ ಸೂಚನೆ
ಮಳೆಯಿಂದ ಹಾವೇರಿ ಜಿಲ್ಲಾಸ್ಪತ್ರೆ ಕಟ್ಟಡ ಸೋರುತ್ತಿದ್ದ ಹಿನ್ನೆಲೆಯಲ್ಲಿ ರೋಗಿಗಳು ಪರದಾಡುವಂತಾಗಿತ್ತು. ಅವ್ಯವಸ್ಥೆ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮಂಗಳವಾರ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ರೋಗಿಗಳಿಂದ ಸಮಸ್ಯೆಗಳನ್ನು ಆಲಿಸಿದರು. ನಗರಕ್ಕೆ ಮಂಗಳವಾರ ಪ್ರಗತಿ ಪರಿಶೀಲನೆ ಸಭೆಗೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆಗೂ ಮುನ್ನವೇ ನೇರವಾಗಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ಆಸ್ಪತ್ರೆ ಅವ್ಯವಸ್ಥೆ ಕಂಡು ಕೆಂಡಾಮಂಡಲರಾದರು. ಜಿಲ್ಲಾಸ್ಪತ್ರೆಯ ಮಕ್ಕಳ ವಾರ್ಡ್, ತಾಯಂದಿರ ವಾರ್ಡ್ ಸೇರಿ ಬಹುತೇಕ ವಾರ್ಡ್‌ಗಳು ಮಳೆಯಿಂದ ಸೋರುತ್ತಿದ್ದು, ರೋಗಿಗಳಿಗೆ ತೀವ್ರ ಸಮಸ್ಯೆಯಾಗಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಎಇಇ ಮಂಜುನಾಥ್ ಅವರನ್ನು ಅಮಾನತುಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶಿಸಿದರು.
Vistara Impact: ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಅವ್ಯವಸ್ಥೆ; ಎಂಜಿನಿಯರ್ ಅಮಾನತಿಗೆ ಸಿಎಂ ಸೂಚನೆ
ಉಳುಮೆ ವೇಳೆ ಟ್ರ್ಯಾಕ್ಟರ್ ಪಲ್ಟಿ ನಿವೃತ್ತ ಶಿಕ್ಷಕ ಸಾವು !
ಪ್ರತ್ಯೇಕ ಪ್ರಕರಣಗಳಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಬೆಳಗಾವಿಯಲ್ಲಿ ಉಳುಮೆ ಮಾಡುವಾಗ, ಕೋಲಾರದಲ್ಲಿ ಮಾವು ತುಂಬಿದ್ದ ಟ್ರ್ಯಾಕ್ಟರ್ ಟ್ರಾಲಿ ಪಲ್ಟಿಯಾಗಿದೆ. ನಿವೃತ್ತ ಶಿಕ್ಷಕ ಹಾಗೂ ಕಾರ್ಮಿಕನೊಬ್ಬ ಮೃತಪಟ್ಟಿದ್ದಾರೆ.
Tractor accident : ಉಳುಮೆ ವೇಳೆ ಟ್ರ್ಯಾಕ್ಟರ್ ಪಲ್ಟಿ; ನಿವೃತ್ತ ಶಿಕ್ಷಕ ಸಾವು
CM Siddaramaiah : ಸಿಎಂಗೆ ಡಬಲ್ ಟ್ರಬಲ್ ! ಸಚಿವರ ಮೇಲೆ ಕಾಂಗ್ರೆಸ್ ಶಾಸಕರಿಂದಲೇ ದೂರು
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಈಗ ಸ್ವಪಕ್ಷೀಯ ಶಾಸಕರ ತಲೆನೋವು ಶುರುವಾಗಿದೆ. ಸಚಿವರು ತಮ್ಮನ್ನು ಕಡೆಗಣಿಸಿದ್ದಾರೆ ಎಂದು ಸಿಎಂಗೆ ದೂರು ನೀಡಿದ್ದಾರೆ ಎನ್ನಲಾಗಿದೆ. ಈ ನಿಟ್ಟಿನಲ್ಲಿ ಸಿಎಂ ಶಾಸಕಾಂಗ ಪಕ್ಷದ ಸಭೆಯನ್ನು ಕರೆದಿದ್ದಾರೆ.
CM Siddaramaiah : ಸಿಎಂಗೆ ಡಬಲ್ ಟ್ರಬಲ್ ! ಸಚಿವರ ಮೇಲೆ ಕಾಂಗ್ರೆಸ್ ಶಾಸಕರಿಂದಲೇ ದೂರು