ಬೆಂಗಳೂರು: ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದ ಆರೋಪದಲ್ಲಿ ಬಂಧಿತರಾಗಿದ್ದ ಬಿಗ್ ಬಾಸ್ ಸೀಸನ್ 10 ಸ್ಪರ್ಧಿ, ಪ್ರಗತಿಪರ ಕೃಷಿಕ ವರ್ತೂರು ಸಂತೋಷ್ ಅವರಿಗೆ ಕೋರ್ಟ್ ಜಾಮೀನು ನೀಡಿದೆ.ಹುಲಿಯುಗುರಿನ ಪೆಂಡೆಂಟ್ ಧರಿಸಿದ್ದನ್ನು ಟಿವಿಯಲ್ಲಿ ಗಮನಿಸಿದ್ದ ಅರಣ್ಯಾಧಿಕಾರಿಗಳು ಕಳೆದ ಭಾನುವಾರ ಬಿಗ್ ಬಾಸ್ ಮನೆಗೇ ದಾಳಿ ನಡೆಸಿ ವರ್ತೂರು ಸಂತೋಷ್ ಅವರನ್ನು ಬಂಧಿಸಿದ್ದರು.. ಸೋಮವಾರ ಅವರನ್ನು ಕೋರ್ಟ್‌ಗೆ ಹಾಜರುಪಡಿಸಿದಾಗ ಕೋರ್ಟ್‌ಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು. ಅದರ ನಡುವೆ ಸಲ್ಲಿಸಿದ ಜಾಮೀನು ಅರ್ಜಿಯ ವಿಚಾರಣೆಯ ಬಳಿಕ ಈಗ ಜಾಮೀನಿಗಡಿ ಬಿಡುಗಡೆಗೆ ಕೋರ್ಟ್ ಆದೇಶ ಮಾಡಿದೆ. ಇದರೊಂದಿಗೆ ಭಾರಿ ಸದ್ದು ಮಾಡಿದ್ದ ಪ್ರಕರಣ ಹೊಸ ತಿರುವು ಪಡೆದಂತಾಗಿದೆ. ಇದರೊಂದಿಗೆ ರಾಜ್ಯದ ಇಂದಿನ ಇನ್ನಿತರ ಪ್ರಮುಖ ಸುದ್ದಿಗಳನ್ನು (Karnataka Live News) ಇಲ್ಲಿಯೇ ಓದಿ.
ದಕ್ಷಿಣ ಪಿನಾಕಿನಿ ಹೊಳೆಯಲ್ಲಿ ವ್ಯಕ್ತಿ ಶವ ಪತ್ತೆ!
ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಮುಗಳೂರು ಬ್ರಿಡ್ಜ್ ಸಮೀಪ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ದಕ್ಷಿಣ ಪಿನಾಕಿನಿ ಹೊಳೆಯಲ್ಲಿ ಮೃತದೇಹವು (Anekal News) ಪತ್ತೆಯಾಗಿದೆ.
Anekal News : ದಕ್ಷಿಣ ಪಿನಾಕಿನಿ ಹೊಳೆಯಲ್ಲಿ ವ್ಯಕ್ತಿ ಶವ ಪತ್ತೆ!
ಅಜ್ಜನ ರಿವಾಲ್ವರ್ ಹಿಡಿದು ಫೈರಿಂಗ್ ಮಾಡಿದ ಮೊಮ್ಮಗ!
ಯುವಕನೊಬ್ಬ ರಿವಾಲ್ವರ್ ಹಿಡಿದು ಗಾಳಿಯಲ್ಲಿ ಫೈರಿಂಗ್ (Firing Case) ಮಾಡಿದ ಘಟನೆ ಬಾಗಲಕೋಟೆ ಜಿಲ್ಲೆಯ ತೇರದಾಳ ಪಟ್ಟಣದಲ್ಲಿ ನಡೆದಿದೆ. ಪೊಲೀಸ್ ಅಧಿಕಾರಿಗಳು ಯುವಕನ ವಿರುದ್ಧ ಕೇಸ್ ದಾಖಲಿಸಲು ಮುಂದಾಗಿದ್ದಾರೆ.
https://vistaranews.com/karnataka/bagalakote/firing-case-grandson-holds-grandfathers-revolver-and-fires/490636.html
ಮಾಂಸಕ್ಕಾಗಿ ನವಿಲುಗಳ ಸಂಹಾರ; ಭಕ್ಷಣೆಗೆ ಮುಂದಾಗಿದ್ದ ಮೂವರ ಬಂಧನ
ರಾಜ್ಯದಲ್ಲಿ ಹುಲಿ ಉಗುರಿನ ಪೆಂಡೆಂಟ್ ಪ್ರಕರಣ ಸದ್ದು ಮಾಡುತ್ತಿರುವ ಬೆನ್ನಲ್ಲೇ ರಾಷ್ಟ್ರಪಕ್ಷಿ ನವಿಲು ಮಾಂಸ (Peacock meat) ಭಕ್ಷಣೆಗೆ ಮುಂದಾಗಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ತುಮಕೂರಿನ (Tumkur News) ಮಾರನಾಯಕನಪಾಳ್ಯದಲ್ಲಿ ಘಟನೆ ನಡೆದಿದೆ.
https://vistaranews.com/karnataka/tumakuru/peacock-meat-three-arrested-for-trying-to-kill-peacocks-for-meat/490563.html
ದಕ್ಷಿಣ ಒಳನಾಡಲ್ಲಿಂದು ಮಧ್ಯಮ ಮಳೆ!
ರಾಜ್ಯಾದ್ಯಂತ ಯಾವುದೇ ಮಳೆ ಮುನ್ಸೂಚನೆ ಇಲ್ಲ. ಬಹುತೇಕ ಎಲ್ಲ ಕಡೆಗಳಲ್ಲಿ ಒಣಹವೆಯೇ ಮೇಲುಗೈ ಸಾಧಿಸಲಿದೆ.
Karnataka Weather : ದಕ್ಷಿಣ ಒಳನಾಡಲ್ಲಿಂದು ಮಧ್ಯಮ ಮಳೆ!