ಬೆಂಗಳೂರು: ರಾಜ್ಯಾದ್ಯಂತ ಹಲವು ಕಡೆ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ಇದನ್ನೂ ಸೇರಿದಂತೆ ರಾಜ್ಯದ ಪ್ರಮುಖ ಸುದ್ದಿ ಬೆಳವಣಿಗೆಗಳನ್ನು (Karnataka live news) ಇಲ್ಲಿ ಗಮನಿಸಿ.
ಪ್ರಿಯಕರನ ಮೋಸಕ್ಕೆ ಮನನೊಂದು ಪ್ರಾಣ ಬಿಟ್ಟ ಯುವತಿ
ಬೆಂಗಳೂರು ಉತ್ತರ ತಾಲೂಕಿನ ಕೆಂಪಾಪುರದಲ್ಲಿ ಯುವತಿಯೊಬ್ಬಳು ಪ್ರಿಯಕರ ವರ್ತನೆಗೆ ಬೇಸತ್ತು (Love Case) ನೇಣಿ ಬಿಗಿದುಕೊಂಡು (self harming) ಮೃತಪಟ್ಟಿರುವ ಘಟನೆ ಕಳೆದ ಶನಿವಾರ (ಜು. 22) ನಡೆದಿದೆ. ವಿದ್ಯಾಶ್ರೀ ಎಂಬಾಕೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
Love Case : ಪ್ರಿಯಕರನ ಮೋಸಕ್ಕೆ ಮನನೊಂದು ಪ್ರಾಣ ಬಿಟ್ಟ ಯುವತಿ
ನಾಲೆಗೆ ಉರುಳಿ ಬಿದ್ದ ಕಾರು
ಮಂಡ್ಯದ ಶಿವಳ್ಳಿ ಠಾಣಾ ವ್ಯಾಪ್ತಿಯ ತಿಬ್ಬನಹಳ್ಳಿ ಬಳಿಯಿರುವ ವಿಸಿ ನಾಲೆಗೆ (Drowned in Canal) ಕಾರು ಬಿದ್ದಿದೆ. ಕಾರು ಚಾಲನೆ ಮಾಡುತ್ತಿದ್ದ ಲೋಕೇಶ್ ಎಂಬಾತ ನೀರಲ್ಲಿ ಕೊಚ್ಚಿ (Road Accident) ಹೋಗಿದ್ದಾರೆ.
Road Accident : ನಾಲೆಗೆ ಉರುಳಿ ಬಿದ್ದ ಕಾರು; ನೀರಲ್ಲಿ ಕೊಚ್ಚಿ ಹೋದ ವ್ಯಕ್ತಿ
BJP Karnataka : ಒಕ್ಕಲಿಗರಿಗೇ ರಾಜ್ಯ ಬಿಜೆಪಿ ಅಧ್ಯಕ್ಷ ಪಟ್ಟ?
ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಈ ಮಧ್ಯೆ ರಾಜ್ಯದಲ್ಲಿ ಬಿಜೆಪಿ ಪಕ್ಷ ಸಂಘಟನೆಯನ್ನು ಮಾಡಿಕೊಳ್ಳಬೇಕಿದೆ. ಆದರೆ, ಇನ್ನೂ ನೂತನ ರಾಜ್ಯಾಧ್ಯಕ್ಷರ ಆಯ್ಕೆ ನಡೆದಿಲ್ಲ. ಹೀಗಾಗಿ ಈ ಪ್ರಕ್ರಿಯೆಗೆ ವೇಗ ನೀಡುತ್ತಿರುವ ಕೇಂದ್ರ ಬಿಜೆಪಿ ನಾಯಕರು ಒಕ್ಕಲಿಗ ಸಮುದಾಯದವರಿಗೆ ಮಣೆ ಹಾಕುವ ಸಾಧ್ಯತೆ ದಟ್ಟವಾಗಿದೆ.
BJP Karnataka : ಒಕ್ಕಲಿಗರಿಗೇ ರಾಜ್ಯ ಬಿಜೆಪಿ ಅಧ್ಯಕ್ಷ ಪಟ್ಟ?