Site icon Vistara News

Karnataka Live News : ದೆಹಲಿಗೆ ಹೋಗಿ ಬರಿಗೈಯಲ್ಲಿ ಬಂದ ಬಿಎಸ್‌ವೈ, ಪ್ರತಿಪಕ್ಷ ನಾಯಕನ ಆಯ್ಕೆ ಇಲ್ಲ

Karnataka Live News Updates
B Somashekhar

ಇನ್ನೆರಡು ದಿನ ಪ್ರತಿಪಕ್ಷ ನಾಯಕನ ಆಯ್ಕೆ ಇಲ್ಲ ಎಂದ ಬಿಎಸ್‌ವೈ

ನವದೆಹಲಿ: ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಮುಗಿದು, ಕಾಂಗ್ರೆಸ್‌ ಸರ್ಕಾರ ರಚನೆಯಾಗಿ ಒಂದು ತಿಂಗಳಾದರೂ ಬಿಜೆಪಿಗೆ ಮಾತ್ರ ಪ್ರತಿಪಕ್ಷ ನಾಯಕನನ್ನು ಆಯ್ಕೆ ಮಾಡಲು ಆಗುತ್ತಿಲ್ಲ. ಪ್ರತಿಪಕ್ಷ ನಾಯಕನ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಬಿ.ಎಸ್‌.ಯಡಿಯೂರಪ್ಪ ಅವರು ಭಾನುವಾರ ದೆಹಲಿಗೆ ತೆರಳಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾದರೂ ಪ್ರತಿಪಕ್ಷ ನಾಯಕನನ್ನು ಆಯ್ಕೆ ಮಾಡಿಲ್ಲ. ಹಾಗಾಗಿ, ಸೋಮವಾರದಿಂದ ಆರಂಭವಾಗುವ ರಾಜ್ಯ ಬಜೆಟ್‌ ಅಧಿವೇಶನದ ವೇಳೆ ಪ್ರತಿಪಕ್ಷ ನಾಯಕನ ಕುರ್ಚಿ ಖಾಲಿಯೇ ಇರಲಿದೆ. ಇನ್ನೆರಡು ದಿನ ಪ್ರತಿಪಕ್ಷ ನಾಯಕನ ಆಯ್ಕೆ ಇಲ್ಲ ಎಂದು ದೆಹಲಿಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

Adarsha Anche

Power Point with HPK : ಸಿದ್ದರಾಮಯ್ಯ ಸೆಕ್ಯುಲರ್‌ ಅಲ್ಲ, ಗ್ಯಾರಂಟಿಯಿಂದ ಬದುಕೇ ಸರ್ವನಾಶ: ಸಿ.ಟಿ. ರವಿ

ವಿಸ್ತಾರ ನ್ಯೂಸ್‌ ಪ್ರಧಾನ ಸಂಪಾದಕ ಹರಿಪ್ರಕಾಶ್‌ ಕೋಣೆಮನೆ ಅವರು ನಡೆಸಿಕೊಡುವ “ಪವರ್‌ ಪಾಯಿಂಟ್‌ ವಿತ್‌ ಎಚ್‌ಪಿಕೆ” ವಿಶೇಷ ಸಂದರ್ಶನದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಮುಕ್ತವಾಗಿ ಮಾತನಾಡಿದ್ದಾರೆ. ಅವರು ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದ ಹಲವು ಅಂಶಗಳ ಬಗ್ಗೆ ಮುಕ್ತವಾಗಿ ಚರ್ಚಿಸಿದ್ದಾರೆ. ಅಲ್ಲದೆ, ಕಾಂಗ್ರೆಸ್‌ ಗ್ಯಾರಂಟಿಯ ಅಪಾಯದ ವಿಚಾರವಾಗಿ ತಮ್ಮ ಮನದಾಳವನ್ನು ಹೊರಹಾಕಿದ್ದಾರೆ. ಅವರ ಸಂದರ್ಶನದ ಸಾರಾಂಶ ಇಲ್ಲಿದೆ.

Power Point with HPK : ಸಿದ್ದರಾಮಯ್ಯ ಸೆಕ್ಯುಲರ್‌ ಅಲ್ಲ, ಗ್ಯಾರಂಟಿಯಿಂದ ಬದುಕೇ ಸರ್ವನಾಶ: ಸಿ.ಟಿ. ರವಿ
Deepa S

ವಿಜಯನಗರದಲ್ಲಿ ಕಲುಷಿತ ನೀರು ಸೇವಿಸಿ 10ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಳ್ಳುತ್ತಿರುವ ಪ್ರಕರಣವು (Water contamination) ಮುಂದುವರಿದಿದೆ. ಇಲ್ಲಿನ ಕೂಡ್ಲಿಗಿ ತಾಲೂಕಿನ ಬಡೇಲಡಕು ಗೊಲ್ಲರಹಟ್ಟಿಯಲ್ಲಿ ಕಲುಷಿತ ನೀರು ಕುಡಿದು 10ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ. ತೀವ್ರ ಅಸ್ವಸ್ಥಗೊಂಡವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Contaminated Water : ವಿಜಯನಗರದಲ್ಲಿ ಕಲುಷಿತ ನೀರು ಸೇವಿಸಿ 10ಕ್ಕೂ ಹೆಚ್ಚು ಮಂದಿ ಅಸ್ವಸ್ಥ
Deepa S

ಮುಂದಿನ 5 ದಿನಗಳು ಕರಾವಳಿಗೆ ಭಾರಿ ಮಳೆ ಅಲರ್ಟ್‌

ಕರ್ನಾಟಕದ ಕರಾವಳಿ (Coastal Districts) ಭಾಗದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಹೀಗಾಗಿ ಮುಂದಿನ 5 ದಿನಗಳ ಕಾಲ ಕರಾವಳಿಗೆ ಆರೆಂಜ್‌ ಅಲರ್ಟ್‌ (Orange warning) ನೀಡಲಾಗಿದೆ. ಜತೆಗೆ ಮಲೆನಾಡು ಜಿಲ್ಲೆಗಳಲ್ಲೂ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather report) ನೀಡಿದೆ. ಆದರೆ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

Weather report : ಇನ್ನೈದು ದಿನ ಭರ್ಜರಿ ಮಳೆಯಾಟ; ಇದು ಕರಾವಳಿಗೆ ಮಾತ್ರ! ಜಲಾಶಯದ ಕತೆ?
Adarsha Anche

‌PM Modi : ನರೇಂದ್ರ ಮೋದಿಗೆ ಬುದ್ಧಿ ಹೇಳಿ; ಪ್ರಧಾನಿ ವಿರುದ್ಧ ರಾಷ್ಟ್ರಪತಿಗೆ ದಿನೇಶ್‌ ಗುಂಡೂರಾವ್ ಪತ್ರ

ರಾಷ್ಟ್ರೀಯ ಕುಡಗೋಲು ಕಣ ರಕ್ತಹೀನತೆ ನಿವಾರಣೆ ಅಭಿಯಾನ” ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಅವರು ರಾಜಕೀಯ ದ್ವೇಷ ಭಾಷಣಕ್ಕೆ ಬಳಸಿಕೊಂಡಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ದೂರಿದ್ದಾರೆ. ಈ ಸಂಬಂಧ ರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ.

‌PM Modi : ನರೇಂದ್ರ ಮೋದಿಗೆ ಬುದ್ಧಿ ಹೇಳಿ; ಪ್ರಧಾನಿ ವಿರುದ್ಧ ರಾಷ್ಟ್ರಪತಿಗೆ ದಿನೇಶ್‌ ಗುಂಡೂರಾವ್ ಪತ್ರ
Exit mobile version