ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramaiah) ಇಂದು ಎರಡು ದಿನಗಳ ಭೇಟಿಗಾಗಿ ಹೊಸದಿಲ್ಲಿಗೆ ಪ್ರಯಾಣ ಬೆಳೆಸಿದ್ದಾರೆ. ಇದರೊಂದಿಗೆ ರಾಜ್ಯದ ಇಂದಿನ ಇನ್ನಷ್ಟು ಪ್ರಮುಖ ಸುದ್ದಿ ಬೆಳವಣಿಗೆಗಳಿಗೆ (Karnataka live news) ಇಲ್ಲಿ ಗಮನಿಸಿ.
ಚಿತ್ರದುರ್ಗ ಕಲುಷಿತ ನೀರು ದುರಂತದಲ್ಲಿ ಸಾವಿನ ಸಂಖ್ಯೆ 3ಕ್ಕೇರಿಕೆ; ತನಿಖೆಗೆ ಸಿಎಂ ಆದೇಶ
ಚಿತ್ರದುರ್ಗ ಜಿಲ್ಲೆಯ ಕವಾಡಿಗರ ಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟವರ ಸಂಖ್ಯೆ ಮೂರಕ್ಕೇರಿದೆ. ಹಟ್ಟಿಯಲ್ಲಿ ನೀರು ಕುಡಿದು ಹೋಗಿದ್ದ ವಡ್ಡರಸಿದ್ದವ್ವನ ಹಳ್ಳಿಯ ನಿವಾಸಿ ಪ್ರವೀಣ್ (27) ಎಂಬ ಯುವಕ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮೃತಪಟ್ಟಿದ್ದಾನೆ. ಈ ಪ್ರಕರಣದ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.
Contaminated Water: ಚಿತ್ರದುರ್ಗ ಕಲುಷಿತ ನೀರು ದುರಂತದಲ್ಲಿ ಸಾವಿನ ಸಂಖ್ಯೆ 3ಕ್ಕೇರಿಕೆ; ತನಿಖೆಗೆ ಸಿಎಂ ಆದೇಶ
ಅನಧಿಕೃತ ಫ್ಲೆಕ್ಸ್, ಬ್ಯಾನರ್; ಕ್ರಮ ಕೈಗೊಳ್ಳದ ಸರ್ಕಾರಕ್ಕೆ ಹೈಕೋರ್ಟ್ ಕ್ಲಾಸ್
ಬೆಂಗಳೂರು ನಗರದಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್ ಅಳವಡಿಕೆಗೆ ಕಡಿವಾಣ ಹಾಕದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಅನಧಿಕೃತ ಜಾಹೀರಾತು ಹಾವಳಿ ತಡೆಯಲು ಪಂಚವಾರ್ಷಿಕ ಯೋಜನೆ ಬೇಕೇ? ಫ್ಲೆಕ್ಸ್ (Unauthorized Flex) ತೆರವಿಗೆ ಶುಭ ಮುಹೂರ್ತಕ್ಕಾಗಿ ಕಾಯುತ್ತಿದ್ದೀರಾ ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಗರಂ ಆಗಿದ್ದಾರೆ.
Unauthorized Flex: ಅನಧಿಕೃತ ಫ್ಲೆಕ್ಸ್, ಬ್ಯಾನರ್; ಕ್ರಮ ಕೈಗೊಳ್ಳದ ಸರ್ಕಾರಕ್ಕೆ ಹೈಕೋರ್ಟ್ ಕ್ಲಾಸ್
ಎರಡು ದಿನಗಳ ದೆಹಲಿ ಪ್ರವಾಸಕ್ಕೆ ತೆರಳಿದ ಸಿಎಂ
ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಎರಡು ದಿನಗಳ ದೆಹಲಿ ಪ್ರವಾಸಕ್ಕೆ ತೆರಳಿದ್ದಾರೆ. ದೆಹಲಿಯಲ್ಲಿಂದು ಕಾಂಗ್ರೆಸ್ ಹೈಕಮಾಂಡ್ ನಾಯಕರ ಜೊತೆ ಸಭೆಯಲ್ಲಿ ಭಾಗಿಯಾಗಲಿದ್ದು, ನಾಳೆ ಪಿಎಂ ನರೇಂದ್ರ ಮೋದಿ ಸೇರಿದಂತೆ ಹಲವು ಕೇಂದ್ರ ಸಚಿವರನ್ನು ಭೇಟಿಯಾಗಲಿದ್ದಾರೆ.