Site icon Vistara News

Karnataka Live News: ಮಣ್ಣಲ್ಲಿ ಮಣ್ಣಾದ ಚಂದನವನದ ಲೀಲಮ್ಮ

Actress Leelavathi
Prabhakar R

ಮಣ್ಣಲ್ಲಿ ಮಣ್ಣಾದ ಲೀಲಾವತಿ; ಸರ್ಕಾರಿ ಗೌರವದೊಂದಿಗೆ ಅಂತ್ಯ ಸಂಸ್ಕಾರ

ಹಿರಿಯ ನಟಿ ಲೀಲಾವತಿ ಅವರ (Actress Leelavathi) ಅಂತ್ಯ ಸಂಸ್ಕಾರ ನೆಲಮಂಗಲದ ಸೋಲದೇವನಹಳ್ಳಿಯ ತೋಟದ ಮನೆ ಬಳಿ ಕುಟುಂಬಸ್ಥರು ಸೇರಿ ಸಾವಿರಾರು ಜನರ ಸಮ್ಮುಖದಲ್ಲಿ ಶನಿವಾರ ಸಂಜೆ ನೆರವೇರಿತು. ಸಕಲ ಸರ್ಕಾರಿ ಗೌರವದೊಂದಿಗೆ ಹಿಂದು ಸಂಪ್ರದಾಯದಂತೆ ಅವರ ಅಂತ್ಯಕ್ರಿಯೆ ನಡೆಯಿತು.

Actress Leelavathi: ಮಣ್ಣಲ್ಲಿ ಮಣ್ಣಾದ ಲೀಲಾವತಿ; ಸರ್ಕಾರಿ ಗೌರವದೊಂದಿಗೆ ಅಂತ್ಯ ಸಂಸ್ಕಾರ

Deepa S

ನಾಳೆ ಬೆಂಗಳೂರು ಸೇರಿ ಹಲವೆಡೆ ಮಳೆ ಸಾಧ್ಯತೆ!

ಮುಂದಿನ 24 ಗಂಟೆಯಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ (Karnataka weather Forecast) ಕೆಲವು ಕಡೆಗಳಲ್ಲಿ ಮಳೆಯಾಗುವ (Rain News) ಬಹಳಷ್ಟು ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣಹವೆ (Dry weather) ಇರಲಿದೆ.

Karnataka Weather : ನಾಳೆ ಬೆಂಗಳೂರು ಸೇರಿ ಹಲವೆಡೆ ಮಳೆ ಸಾಧ್ಯತೆ!
Prabhakar R

ನಟಿ ಲೀಲಾವತಿಗೆ ಅಂತಿಮ ನಮನ ಸಲ್ಲಿಸಿದ ಸಿಎಂ, ಡಿಸಿಎಂ ಸೇರಿ ಗಣ್ಯರು

ನೆಲಮಂಗಲದ ಅಂಬೇಡ್ಕರ್‌ ಮೈದಾನದ ಬಳಿಕ ಹಿರಿಯ ನಟಿ ಲೀಲಾವತಿ ಅವರ (Actress Leelavathi) ಅಂತಿಮ ದರ್ಶನಕ್ಕೆ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಬಿ.ಎಸ್‌.ಯರಿಯೂರಪ್ಪ ಸೇರಿ ರಾಜಕೀಯ ನಾಯಕರು ಹಾಗೂ ಚಿತ್ರರಂಗದ ಗಣ್ಯರು ಆಗಮಿಸಿ ಅಂತಿಮ ನಮನ ಸಲ್ಲಿಸಿದರು.

Actress Leelavathi: ನಟಿ ಲೀಲಾವತಿಗೆ ಅಂತಿಮ ನಮನ ಸಲ್ಲಿಸಿದ ಸಿಎಂ, ಡಿಸಿಎಂ ಸೇರಿ ಗಣ್ಯರು
Deepa S

ನಿಂತಿದ್ದ ಟ್ರ್ಯಾಕ್ಟರ್‌ಗೆ ಆಂಬ್ಯುಲೆನ್ಸ್‌ಗೆ ಡಿಕ್ಕಿ; ಶಿಶು ಸಹಿತ ಗರ್ಭಿಣಿ ಸಾವು

ಆ ಎರಡು ಕುಟುಂಬಗಳು ಹೊಸ ಅತಿಥಿಯ ಆಗಮನದಲ್ಲಿತ್ತು. ಆದರೆ ವಿಧಿಯಾಟವೇ ಬೇರೆಯಾಗಿತ್ತು. ಚಾಲಕನ ಅಜಾಗರೂಕತೆಯಿಂದಾಗಿ ಎರಡು ಜೀವಗಳು ಪ್ರಾಣ ಕಳೆದುಕೊಂಡಿವೆ. ಗರ್ಭಿಣಿಯನ್ನು ಕರೆದೊಯ್ಯುತ್ತಿದ್ದ 108 ಆಂಬ್ಯುಲೆನ್ಸ್ ವಾಹನವು ರಸ್ತೆ ಬದಿ ನಿಂತಿದ್ದ ಟ್ರ್ಯಾಕ್ಟರ್‌ಗೆ ಡಿಕ್ಕಿ (Road Accident) ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಹೊಟ್ಟೆಯೊಳಗಿದ್ದ ಶಿಶು ಸಹಿತ ಗರ್ಭಿಣಿ ಆಂಬ್ಯುಲೆನ್ಸ್‌ನೊಳಗೆ ಮೃತಪಟ್ಟಿದ್ದಾರೆ.

Road Accident : ನಿಂತಿದ್ದ ಟ್ರ್ಯಾಕ್ಟರ್‌ಗೆ ಆಂಬ್ಯುಲೆನ್ಸ್‌ಗೆ ಡಿಕ್ಕಿ; ಶಿಶು ಸಹಿತ ಗರ್ಭಿಣಿ ಸಾವು
Adarsha Anche

Self Harming: ಕೊಡಗು ರೆಸಾರ್ಟ್‌ನಲ್ಲಿ ಮಗುವಿಗೆ ನೇಣು ಬಿಗಿದು, ತಂದೆ-ತಾಯಿ ಆತ್ಮಹತ್ಯೆ

ಕೇರಳದ ಕೊಲ್ಲಂನಿಂದ ಮಡಿಕೇರಿಗೆ ಆಗಮಿಸಿದ್ದ ಕುಟುಂಬ ಇದಾಗಿದೆ. ಆದರೆ, ಏಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಕಾರಣ ಇನ್ನೂ ತಿಳಿದುಬಂದಿಲ್ಲ. ಮೃತರ ಗುರುತು ಇನ್ನಷ್ಟೇ ತಿಳಿದುಬರಬೇಕಿದೆ. ಮಗುವಿಗೆ ನೇಣು ಹಾಕಿ ಬಳಿಕ ಇವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.

https://vistaranews.com/karnataka/kodagu/self-harming-parents-commit-suicide-by-hanging-themselves-at-kodagu-resort/528283.html

Exit mobile version