Site icon Vistara News

Karnataka Weather : ರಾಜ್ಯದಲ್ಲಿ ಇನ್ನೊಂದು ವಾರ ಮಳೆಯಾಟ!

Rain Alert

ಬೆಂಗಳೂರು: ಡಿ.31 ರಂದು ರಾಜ್ಯಾದ್ಯಂತ ಬಹುತೇಕ ಕಡೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಬೆಳಗ್ಗೆ ಹಾಗೂ ಸಂಜೆ ಚಳಿ ತೀವ್ರತೆ (Karnataka Weather) ಹೆಚ್ಚಾಗಲಿದೆ. ಆಗಾಗ ಸೂರ್ಯ ತನ್ನ ದರ್ಶನ ನೀಡಲಿದ್ದಾನೆ. ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಲ್ಲಿ ಮಳೆ (Rain News) ಸಾಧ್ಯತೆ ಇದ್ದರೆ, ಉತ್ತರ ಒಳನಾಡಲ್ಲಿ ಚಳಿ ವಾತಾವರಣ ಇರಲಿದೆ.

ಮುಂಬರುವ ದಿನಗಳಲ್ಲಿ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಅಲ್ಲಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ. ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಜಿಟಿ ಜಿಟಿ ಮಳೆ ಸಾಧ್ಯತೆ ಇದೆ. ಇನ್ನು ದಕ್ಷಿಣ ಒಳನಾಡಿನ ಚಿತ್ರದುರ್ಗ, ದಾವಣಗೆರೆ, ಮೈಸೂರು, ತುಮಕೂರಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಜಿಲ್ಲೆಗಳಿಗೆ ಯಾವುದೇ ಮಳೆ ಮುನ್ಸೂಚನೆ ಇಲ್ಲ. ಬದಲಿಗೆ ಉತ್ತರ ಒಳನಾಡಲ್ಲಿ ಥಂಡಿ ವಾತಾವರಣವು ಜನರನ್ನು ನಡುಗಿಸಲಿದೆ. ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್‌ ಕಡಿಮೆ ಇರಲಿದೆ. ಇದರಿಂದಾಗಿ ಚಳಿಯು ಗಡಗಡ ನಡುಗಿಸಲಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ ಸೇರಿದಂತೆ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಚಳಿ ಇರಲಿದೆ. ಇನ್ನು ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ರಾಮನಗರ, ವಿಜಯನಗರದಲ್ಲೂ ಯಥಾಸ್ಥಿತಿ ಇರಲಿದೆ.

ಮಳೆ ಸೂಚನೆ ಇಲ್ಲ

ರಾಜಧಾನಿ ಬೆಂಗಳೂರಲ್ಲಿ ಯಾವುದೇ ಮಳೆ ಸೂಚನೆ ಇಲ್ಲ. ಆದರೆ ಬೆಂಗಳೂರಲ್ಲಿ ಇನ್ನೊಂದು ವಾರವೂ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಹಾಗೂ ಕನಿಷ್ಠ ಉಷ್ಣಾಂಶವು 18 ಡಿ.ಸೆ ಇರಲಿದೆ.

ಇದನ್ನೂ ಓದಿ: Chicken Soup: ಚಳಿಗಾಲದಲ್ಲಿ ಬಿಸಿಬಿಸಿಯಾಗಿ ಚಿಕನ್‌ ಸೂಪ್‌ ಮಾಡಿ ಸವಿಯಲು ಇಲ್ಲಿವೆ ಟಿಪ್ಸ್!

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 29 ಡಿ.ಸೆ -18 ಡಿ.ಸೆ
ಮಂಗಳೂರು: 34 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 30 ಡಿ.ಸೆ – 15 ಡಿ.ಸೆ
ಗದಗ: 32 ಡಿ.ಸೆ – 15 ಡಿ.ಸೆ
ಹೊನ್ನಾವರ: 36 ಡಿ.ಸೆ- 22 ಡಿ.ಸೆ
ಕಲಬುರಗಿ: 32 ಡಿ.ಸೆ – 18 ಡಿ.ಸೆ
ಬೆಳಗಾವಿ: 31 ಡಿ.ಸೆ – 14 ಡಿ.ಸೆ
ಕಾರವಾರ: 36 ಡಿ.ಸೆ – 22 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version