ಬೆಂಗಳೂರು: ಮುಂದಿನ ಒಂದು ವಾರಗಳ ಕಾಲ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಮಲೆನಾಡಲ್ಲಿ ಚದುರಿದಂತೆ ಮಳೆಯಾದರೆ, ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಲಘು ಮಳೆಯಾಗುವ (Rain News) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather forecast) ಮುನ್ಸೂಚನೆಯನ್ನು ನೀಡಿದೆ.
ಮಲೆನಾಡಿನ ಹಾಸನ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಹಾವೇರಿ, ವಿಜಯನಗರ, ಬಳ್ಳಾರಿ, ಕೊಪ್ಪಳ ಮತ್ತು ಗದಗದಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ. ಉಳಿದ ಭಾಗಗಳಲ್ಲಿ ಹವಾಮಾನವು ಮೇಲುಗೈ ಸಾಧಿಸುವ ಸಾಧ್ಯತೆಯಿದೆ.
ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆ ಇರುತ್ತದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇದನ್ನೂ ಓದಿ: Urfi Javed: ಪೊಲೀಸ್ ಕಸ್ಟಡಿಗೆ ಉರ್ಫಿ ಜಾವೇದ್; ವಿಡಿಯೊ ವೈರಲ್!
ಈ ಭಾಗಕ್ಕೆ ಯೆಲ್ಲೋ ಅಲರ್ಟ್
ನ. 3,4,5ರಂದು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಹಳದಿ ಮುನ್ನೇಚ್ಚರಿಕೆಯನ್ನು ನೀಡಲಾಗಿದೆ. ಕೊಡಗು, ಚಾಮರಾಜನಗರ, ಮೈಸೂರು, ಮಂಡ್ಯ, ಹಾಸನ, ಚಿಕ್ಕಮಗಳೂರಲ್ಲಿ ಸುಮಾರು 7 ಸೆಂ.ಮೀ ನಷ್ಟು ಮಳೆಯಾಗುವ ನಿರೀಕ್ಷೆ ಇದೆ. ಹೀಗಾಗಿ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಉಷ್ಣಾಂಶ ಏರಿಕೆ
ಒಳನಾಡಿನ ಕೆಲವು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ. ಜತೆಗೆ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಕರಾವಳಿಯ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ.
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 30 ಡಿ.ಸೆ – 20 ಡಿ.ಸೆ
ಮಂಗಳೂರು: 32 ಡಿ.ಸೆ – 25 ಡಿ.ಸೆ
ಚಿತ್ರದುರ್ಗ: 31 ಡಿ.ಸೆ – 21 ಡಿ.ಸೆ
ಗದಗ: 33 ಡಿ.ಸೆ – 21 ಡಿ.ಸೆ
ಹೊನ್ನಾವರ: 34 ಡಿ.ಸೆ- 23 ಡಿ.ಸೆ
ಕಲಬುರಗಿ: 34 ಡಿ.ಸೆ – 22 ಡಿ.ಸೆ
ಬೆಳಗಾವಿ: 31 ಡಿ.ಸೆ – 18 ಡಿ.ಸೆ
ಕಾರವಾರ: 35 ಡಿ.ಸೆ – 24 ಡಿ.ಸೆ
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ