Site icon Vistara News

Karnataka Weather: ಬಾಗಲಕೋಟೆಯಲ್ಲಿ ಅತಿ ಹೆಚ್ಚು ಉಷ್ಣಾಂಶ ದಾಖಲು; ಒಳನಾಡಿನ ಒಂದೆರಡು ಕಡೆ ಹಗುರ ಮಳೆ

Karnataka Weather

ಬೆಂಗಳೂರು: ಈ ಬಾರಿ ಬೇಸಿಗೆಯಲ್ಲಿ ತೀವ್ರವಾದ ಬಿಸಿಲಿನಿಂದ ರಾಜ್ಯದ ಜನತೆ ಕಂಗೆಟ್ಟಿದ್ದಾರೆ. ಈ ನಡುವೆ ಮಂಗಳವಾರ ಬಾಗಲಕೋಟೆಯಲ್ಲಿ ರಾಜ್ಯದಲ್ಲೇ ಅತಿ ಗರಿಷ್ಠ, ಅಂದರೆ 41 ಡಿಗ್ರಿ ಸೆ. ಉಷ್ಣಾಂಶ (Karnataka Weather) ದಾಖಲಾಗಿದೆ. ಮುಂದಿನ 5 ದಿನಗಳವರೆಗೆ ರಾಜ್ಯದಲ್ಲಿ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇರುವುದಿಲ್ಲ ಎಂದು ಭಾರತೀಯ ಹವಾಮಾನ ಇಲಾಖೆ (India Meteorological Department) ಮಾಹಿತಿ ನೀಡಿದೆ.

ಕಳೆದ 24 ಗಂಟೆಗಳಲ್ಲಿ ರಾಜ್ಯದ ಒಳನಾಡಿನ ಒಂದೆರಡು ಕಡೆಗಳಲ್ಲಿ 2 ರಿಂದ 4 ಡಿಗ್ರಿ ಸೆ. ಉಷ್ಣಾಂಶ(temperature) ಇಳಿಕೆಯಾಗಿರುವುದು ಕಂಡುಬಂದಿದ್ದು, ಕರಾವಳಿ ಮತ್ತು ಒಳನಾಡಿನ ಹೆಚ್ಚಿನ ಕಡೆಗಳಲ್ಲಿ ಹೆಚ್ಚಿನ ಬದಲಾವಣೆ ಕಂಡುಬಂದಿಲ್ಲ. ಒಳನಾಡಿನ ಒಂದೆರಡು ಕಡೆ (ಹರಪನಹಳ್ಳಿ) ಹಗುರ ಮಳೆಯಾಗಿದ್ದು, ಕರಾವಳಿ ಭಾಗದಲ್ಲಿ ಒಣ ಹವೆ ಇತ್ತು.

ಇನ್ನು ಗುರುವಾರ (ಏ.11ರಂದು) ಬೀದರ್, ಕಲಬುರಗಿ, ವಿಜಯಪುರ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಯಾದಗಿರಿ, ರಾಯಚೂರು, ಗದಗ, ಹಾವೇರಿ, ಕೊಡಗು, ಚಿಕ್ಕಮಗಳೂರು, ಮೈಸೂರು, ಮಂಡ್ಯ ಮತ್ತು ಹಾಸನ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.

ಇದನ್ನೂ ಓದಿ | Blood Pressure: ಈ 10 ಸೂತ್ರ ಪಾಲಿಸಿ; ಬಿಪಿ ನಿಮ್ಮ ಹತ್ತಿರವೂ ಸುಳಿಯದು!

ಮುಂದಿನ 3 ದಿನಗಳಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳವರೆಗೆ ಕರ್ನಾಟಕದ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ. ಸದ್ಯಕ್ಕೆ ಯಾವುದೇ ಶಾಖದ ಅಲೆಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿಲ್ಲ.

ಗುಡುಗು ಮುನ್ನೆಚ್ಚರಿಕೆ

ಏ.13ರವರೆಗೆ ಉತ್ತರ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಮತ್ತು ಏ.12ರಿಂದ 13 ರವರೆಗೆ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಸಿಡಿಲು ಸಂಭವಿಸುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ಹೇಗಿರಲಿದೆ?

ಮುಂದಿನ 24 ಗಂಟೆಗಳ ಕಾಲ ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಅಕಾಶವಿರುತ್ತದೆ. ಗರಿಷ್ಠ ಉಷ್ಣಾಂಶ 35 ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ. ಅದೇ ರೀತಿ ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಉಷ್ಣಾಂಶ 36 ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ.

ಶಾಖದ ಅಲೆಯಿಂದ ರಕ್ಷಿಸಿಕೊಳ್ಳಲು ಸಲಹೆಗಳು

ಶಾಖದ ಅಲೆ, ಶಾಖಾಘಾತದಿಂದ ಜನರಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಹೀಗಾಗಿ ಶಾಖದ ಅಲೆ ತೀವ್ರತೆಯಿಂದ ರಕ್ಷಣೆ ಪಡೆಯಲು ಜನರು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಹವಾಮಾನ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಸಾಮಾನ್ಯ ಜನರಿಗೆ

ರೈತರು/ಕೃಷಿ ಕಾರ್ಮಿಕರು

ನೀವು ಹೊಲದಲ್ಲಿ ಕೆಲಸ ಮಾಡುತ್ತಿದ್ದರೆ, ಟೋಪಿ ಅಥವಾ ಛತ್ರಿ ಬಳಸಿ ಮತ್ತು ನಿಮ್ಮ ತಲೆ, ಕುತ್ತಿಗೆ, ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಬಳಸಿ.

ಕ್ರೀಡಾಪಟುಗಳಿಗೆ

ಹೊರಗಿನ ತಾಪಮಾನ ಹೆಚ್ಚಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸಿ.

ಇದನ್ನೂ ಓದಿ | Millets For Health: ಸಿರಿಧಾನ್ಯಗಳನ್ನು ನಾವು ಏಕೆ ತಿನ್ನಬೇಕೆಂದರೆ…

Exit mobile version