ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ದಕ್ಷಿಣ ಒಳನಾಡು ಹಾಗೂ ಕರಾವಳಿಯ ಒಂದೆರಡು ಕಡೆಗಳಲ್ಲಿ ಮಳೆಯಾಗುವ (Rain News) ಸಾಧ್ಯತೆ ಇದೆ. ಜತೆಗೆ ಗುಡುಗು ಮಿಂಚಿನ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka weather Forecast) ನೀಡಿದೆ.
ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದರೆ, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ. ಇನ್ನೆರಡು ದಿನಗಳು ಕರಾವಳಿಯ ದಕ್ಷಿಣ ಕನ್ನಡ, ಉಡುಪಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದರೆ, ಉತ್ತರ ಕನ್ನಡದಲ್ಲಿ ಒಣಹವೆ ಇರಲಿದೆ.
ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಮೈಸೂರಲ್ಲಿ ಮಳೆ ನಿರೀಕ್ಷೆ ಇದೆ.
ಇದನ್ನೂ ಓದಿ: Model Fashion Life: ಕಲಾತ್ಮಕ ರೆಟ್ರೊ ಫ್ಯಾಷನ್ ಪ್ರಿಯೆ ಮಾಡೆಲ್ ಲುಸಿ ಸರೆರಿಯಾ
ಭಾಗಶಃ ಮೋಡ ಕವಿದ ವಾತಾವರಣ!
ಬೆಂಗಳೂರಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿಯಂದು ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕಿದ ವಾತಾವರಣ ಇರಲಿದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇಲ್ಲೆಲ್ಲ ಶುಷ್ಕ ವಾತಾವರಣ
ದಕ್ಷಿಣ ಒಳನಾಡಿ ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ ಹಾಗೂ ರಾಮನಗರ, ತುಮಕೂರು, ವಿಜಯನಗರದಲ್ಲಿ ಒಣಹವೆ ಇರಲಿದೆ. ಇನ್ನು ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣಹವೆಯೇ ಇರಲಿದೆ.
ಶನಿವಾರ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿರುವ ವರದಿ ಆಗಿದೆ. ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ. ಮೂಲ್ಕಿ, ಪುತ್ತೂರು, ಮಂಗಳೂರು ವಿಮಾಣ ನಿಲ್ದಾಣದಲ್ಲಿ ತಲಾ 4 ಸೆಂ.ಮೀ ಮಳೆಯಾಗಿದೆ. ಪಣಂಬೂರಲ್ಲಿ 2, ಮಣಿ, ಮಂಗಳೂರು, ಉಪ್ಪಿನಂಗಡಿ, ಶ್ರವಣಬೆಳಗೊಳದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ಕನಿಷ್ಠ ಉಷ್ಣಾಂಶ 13.9 ಡಿ.ಸೆ ವಿಜಯಪುರದಲ್ಲಿ ದಾಖಲಾಗಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ