Site icon Vistara News

Karnataka Weather : ಬೆಂಗಳೂರಲ್ಲಿ ಚುಮು ಚುಮು ಚಳಿ ; ಮಲೆನಾಡಲ್ಲಿ ಸಣ್‌ ಮಳೆ

Karnataka Weather Forecast

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ರಾಜ್ಯದಲ್ಲಿ ಒಣಹವೆ (Dry weather) ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (karnataka weather Forecast) ಮುನ್ಸೂಚನೆಯನ್ನು ನೀಡಿದೆ. ಮುಂದಿನ 48 ಗಂಟೆಯಲ್ಲಿ ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಕೂಡಿದ (Rain News) ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ, ಮಂಡ್ಯ, ಮೈಸೂರು, ರಾಮನಗರದ ಅಲ್ಲಲ್ಲಿ ಸಣ್ಣ ಮಳೆಯಾಗಲಿದೆ. ಜತೆಗೆ ಮಲೆನಾಡಿನ ಹಾಸನ, ಕೊಡಗಿನಲ್ಲೂ ಮಳೆಯ ಸಿಂಚನವಾಗಲಿದೆ. ಕೆಲವೊಮ್ಮೆ ಶೀತ ಗಾಳಿಯು ಬೀಸಲಿದೆ.

ತಾಪಮಾನ ಎಚ್ಚರಿಕೆ

ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಯಿದೆ. ಹೀಗಾಗಿ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ ಸೇರಿದಂತೆ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು ಸೇರಿದಂತೆ ವಿಜಯಪುರ, ಯಾದಗಿರಿಯಲ್ಲಿ ಥಂಡಿ ವಾತಾವರಣ ಇರಲಿದೆ.

ಇದನ್ನೂ ಓದಿ: Self Harming : ಹಾಸ್ಟೆಲ್‌ನ ಬಾತ್‌ ರೂಂನಲ್ಲಿ ನೇಣು ಬಿಗಿದುಕೊಂಡ ವಿದ್ಯಾರ್ಥಿ

ಬೆಂಗಳೂರಲ್ಲಿ ಮಂಜು

ಬೆಂಗಳೂರಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ದಟ್ಟ ಮಂಜು ಆವರಿಸಲಿದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 15 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇಲ್ಲೆಲ್ಲ ಶುಷ್ಕ ವಾತಾವರಣ

ದಕ್ಷಿಣ ಒಳನಾಡಿನ ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ತುಮಕೂರು, ವಿಜಯನಗರದಲ್ಲಿ ಶುಷ್ಕ ವಾತಾವರಣ ಇರಲಿದೆ. ಜತೆಗೆ ಕರಾವಳಿ‌ಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಒಣಹವೆ ಇರಲಿದೆ.

ಇದನ್ನೂ ಓದಿ: ಕನ್ನಡ ನಾಮಫಲಕ ಅಳವಡಿಕೆಗೆ ಫೆ.28 ಕೊನೇ ದಿನ; ಗಡುವು ಮೀರಿದರೆ ಶಿಸ್ತು ಕ್ರಮ

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 29 ಡಿ.ಸೆ -15 ಡಿ.ಸೆ
ಮಂಗಳೂರು: 34 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 29 ಡಿ.ಸೆ – 16 ಡಿ.ಸೆ
ಗದಗ: 32 ಡಿ.ಸೆ – 14 ಡಿ.ಸೆ
ಹೊನ್ನಾವರ: 36 ಡಿ.ಸೆ- 22 ಡಿ.ಸೆ
ಕಲಬುರಗಿ: 32 ಡಿ.ಸೆ – 17 ಡಿ.ಸೆ
ಬೆಳಗಾವಿ: 29 ಡಿ.ಸೆ – 14 ಡಿ.ಸೆ
ಕಾರವಾರ: 36 ಡಿ.ಸೆ – 20 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version