Site icon Vistara News

Karnataka Weather : ಕರಾವಳಿ, ದಕ್ಷಿಣದಲ್ಲಿ ಚಳಿ ಏಟು; ಉತ್ತರ ಒಳನಾಡಿನಲ್ಲಿ ಒಣ ಹವೆ

Dry And cold weather girl wearing

ಬೆಂಗಳೂರು: ರಾಜ್ಯಾದ್ಯಂತ ಶುಕ್ರವಾರ ಒಣಹವೆ (Dry Weather) ಇತ್ತು. ಗರಿಷ್ಠ ಉಷ್ಣಾಂಶ 36.9 ಡಿ.ಸೆ ಕಾರವಾರ ಹಾಗೂ ಕಡಿಮೆ ಉಷ್ಣಾಂಶ 13.0 ಡಿ.ಸೆ. ವಿಜಯಪುರದಲ್ಲಿ ದಾಖಲಾಗಿದೆ. ಮುಂದಿನ 24 ಗಂಟೆಯಲ್ಲಿ ಭಾಗಶಃ ಒಣ ಹವೆ (Karnataka weather Forecast) ಇರುವ ಸಾಧ್ಯತೆ ಇದೆ.

ಮುಂದಿನ 48 ಗಂಟೆಯೊಳಗೆ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಇರಲಿದೆ. ರಾಜ್ಯಾದ್ಯಂತ ಹಲವು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ಇಲ್ಲೆಲ್ಲ ಚಳಿ ವಾತಾವರಣ

ಕರಾವಳಿ ಮತ್ತು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆಯಿರುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೆಲವೊಮ್ಮೆ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಬೆಳಗಿನಜಾವ ಮಂಜು ಮುಸುಕಿದ ರೀತಿ ಇರಲಿದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಮಳೆ ಸಾಧ್ಯತೆ

ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕೋಲಾರದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡಿನ ಹಾಸನದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಉಳಿದ ಭಾಗಗಳಲ್ಲಿ ಒಣಹವೆ ಮುಂದುವರಿಯಲಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 30 ಡಿ.ಸೆ – 20 ಡಿ.ಸೆ
ಮಂಗಳೂರು: 33 ಡಿ.ಸೆ – 24 ಡಿ.ಸೆ
ಚಿತ್ರದುರ್ಗ: 33 ಡಿ.ಸೆ – 18 ಡಿ.ಸೆ
ಗದಗ: 33 ಡಿ.ಸೆ – 19 ಡಿ.ಸೆ
ಹೊನ್ನಾವರ: 36 ಡಿ.ಸೆ- 20 ಡಿ.ಸೆ
ಕಲಬುರಗಿ: 34 ಡಿ.ಸೆ – 19 ಡಿ.ಸೆ
ಬೆಳಗಾವಿ: 30 ಡಿ.ಸೆ – 15 ಡಿ.ಸೆ
ಕಾರವಾರ: 36 ಡಿ.ಸೆ – 21 ಡಿ.ಸೆ

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version