ಬೆಂಗಳೂರು: ರಾಜ್ಯಾದ್ಯಂತ ಸಾಧಾರಣ ಮಳೆಯೊಂದಿಗೆ ಭಾರಿ ಮಳೆಯಾಗುವ (Rain News) ಎಚ್ಚರಿಕೆಯನ್ನು ಹವಾಮಾನ ಇಲಾಖೆ (karnataka weather Forecast) ನೀಡಿದೆ. ಒಳನಾಡು ಹಾಗೂ ಮಲೆನಾಡು, ಕರಾವಳಿಯಲ್ಲಿ ಭರ್ಜರಿ ಮಳೆಯಾಗಲಿದೆ. ಕೆಲವೊಮ್ಮೆ ಗುಡುಗು, ಮಿಂಚು ಸಹಿತ ಮಳೆಯಾಗಬಹುದು.
ದಕ್ಷಿಣ ಒಳನಾಡಿನ ದಾವಣಗೆರೆ ಮತ್ತು ಚಿತ್ರದುರ್ಗದಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕೋಲಾರ ಮತ್ತು ತುಮಕೂರಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಲ್ಲಿ ಮೋಡ ಕವಿದ ವಾತಾವರಣವಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಜಿಟಿ ಜಿಟಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಹಾಗೂ ಕನಿಷ್ಠ ಉಷ್ಣಾಂಶವು ಕ್ರಮವಾಗಿ 26-20 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಉತ್ತರ ಒಳನಾಡಿನ ವಿಜಯನಗರ ಜಿಲ್ಲೆಯಾದ್ಯಂತ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಅತ್ಯಂತ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆ ಇದೆ.
ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಗುಡುಗು ಸಹಿತ ವ್ಯಾಪಕವಾಗಿ ಮಳೆ ಸುರಿಯಬಹುದು. ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಬೀಳಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ: Electricution Case : ಕ್ರಿಕೆಟ್ ಆಡುತ್ತಿದ್ದ ಬಾಲಕ ಕ್ಯಾಚ್ ಹಿಡಿಯುವಾಗ ವಿದ್ಯುತ್ ತಂತಿ ತಗುಲಿ ಸಾವು
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 28 ಡಿ.ಸೆ -19 ಡಿ.ಸೆ
ಮಂಗಳೂರು: 33 ಡಿ.ಸೆ – 24 ಡಿ.ಸೆ
ಚಿತ್ರದುರ್ಗ: 31 ಡಿ.ಸೆ – 20 ಡಿ.ಸೆ
ಗದಗ: 32 ಡಿ.ಸೆ – 20 ಡಿ.ಸೆ
ಹೊನ್ನಾವರ: 35 ಡಿ.ಸೆ- 24 ಡಿ.ಸೆ
ಕಲಬುರಗಿ: 35 ಡಿ.ಸೆ – 21 ಡಿ.ಸೆ
ಬೆಳಗಾವಿ: 31 ಡಿ.ಸೆ – 19 ಡಿ.ಸೆ
ಕಾರವಾರ: 35 ಡಿ.ಸೆ – 24 ಡಿ.ಸೆ
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.