ಬೆಂಗಳೂರು: ರಾಜ್ಯದ ಮುಕ್ಕಾಲು ಭಾಗ ಶುಷ್ಕ ವಾತಾವರಣ ಇರಲಿದ್ದು, ಕಾಲು ಭಾಗದಲ್ಲಿ ಮಂಗಳವಾರದಂದು ಮೋಡದ ಕವಿದ ವಾತಾವರಣದೊಂದಿಗೆ (Karnataka weather Forecast) ಮಳೆಯಾಗುವ (Rain News) ಸಾಧ್ಯತೆ ಇದೆ. ಮುಂದಿನ 24 ಗಂಟೆಯಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಇಲ್ಲೆಲ್ಲ ಹಗುರ ಮಳೆ
ದಕ್ಷಿಣ ಒಳನಾಡಿನ ಮೈಸೂರು ಮತ್ತು ಮಂಡ್ಯ, ಚಾಮರಾಜನಗರದಲ್ಲಿ ಗಾಳಿ ಮಿಶ್ರಿತ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿಯ ಅಲ್ಲಲ್ಲಿ ಮಳೆ ಇರಲಿದ್ದು, ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲೂ ಸಣ್ಣ ಪ್ರಮಾಣದಲ್ಲಿ ಮಳೆ ನಿರೀಕ್ಷೆ ಇದೆ.
ಬೆಂಗಳೂರಲ್ಲಿ ಮಳೆಯಿಲ್ಲ, ಭಾರಿ ಚಳಿಯಷ್ಟೇ
ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಯಾವುದೇ ಮಳೆ ಸೂಚನೆಯನ್ನು ನೀಡಿಲ್ಲ. ಬೆಳಗಿನ ಜಾವ ಮುಸುಕುವ ಸಾಧ್ಯತೆ ಇರಲಿದೆ. ಗರಿಷ್ಠ ಉಷ್ಣಾಂಶ 24 ಹಾಗೂ ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇದನ್ನೂ ಓದಿ: Wedding Jewel Fashion: ವೆಡ್ಡಿಂಗ್ ಟ್ರೆಡಿಷನಲ್ ಜ್ಯುವೆಲ್ ಫ್ಯಾಷನ್‌ಗೆ ಮರಳಿದ ಕಾಸಿನಸರ
ಉತ್ತರ ಒಳನಾಡಲ್ಲೂ ಶುಷ್ಕ ವಾತಾವರಣ
ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಯಾವುದೇ ಮಳೆ ಸೂಚನೆ ಇಲ್ಲ. ಬದಲಿಗೆ ಒಣಹವೆಯೇ ಮುಂದುವರಿಯಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ ಹಾಗೂ ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಶುಷ್ಕ ವಾತಾವರಣವೇ ಮುಂದುವರಿಯಲಿದೆ.
ಜತಗೆ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಹಾಗೂ ದಾವಣಗೆರೆ, ಕೋಲಾರ, ರಾಮನಗರ, ತುಮಕೂರು, ವಿಜಯನಗರದಲ್ಲೂ ಒಣಹವೆ ಇರಲಿದೆ. ಮಲೆನಾಡಿನ ಶಿವಮೊಗ್ಗ ಹಾಗೂ ಕರಾವಳಿಯ ಉತ್ತರ ಕನ್ನಡದಲ್ಲಿ ಶುಷ್ಕ ವಾತಾವರಣ ಇರಲಿದೆ.
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 27 ಡಿ.ಸೆ -19 ಡಿ.ಸೆ
ಮಂಗಳೂರು: 33 ಡಿ.ಸೆ – 24 ಡಿ.ಸೆ
ಚಿತ್ರದುರ್ಗ: 29 ಡಿ.ಸೆ – 17 ಡಿ.ಸೆ
ಗದಗ: 29 ಡಿ.ಸೆ – 16 ಡಿ.ಸೆ
ಹೊನ್ನಾವರ: 35 ಡಿ.ಸೆ- 23 ಡಿ.ಸೆ
ಕಲಬುರಗಿ: 31 ಡಿ.ಸೆ – 20 ಡಿ.ಸೆ
ಬೆಳಗಾವಿ: 31 ಡಿ.ಸೆ – 18 ಡಿ.ಸೆ
ಕಾರವಾರ: 35 ಡಿ.ಸೆ – 23 ಡಿ.ಸೆ
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಲಿಂಕ್ ಕ್ಲಿಕ್ ಮಾಡಿ