ಬೆಂಗಳೂರು: ರಾಜ್ಯಾದ್ಯಂತ ನ.13ರ ಸೋಮವಾರ ಒಣಹವೆ (Dry weather) ಮುಂದುವರಿಯಲಿದೆ. ಜತೆಗೆ ಕೆಲವೆಡೆ ವೇಗವಾಗಿ ಬೀಸಲಿದೆ. ಆದರೆ ನ.14ರ ನಂತರ ರಾಜ್ಯಾದ್ಯಂತ ಕೆಲವೆಡೆ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ (karnataka weather Forecast) ಮುನ್ಸೂಚನೆಯನ್ನು ನೀಡಿದೆ.
ನವೆಂಬರ್ 14ರಂದು ಆಗ್ನೇಯ ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶವು ರೂಪುಗೊಳ್ಳಲಿದೆ. ಇದು ಪಶ್ಚಿಮ-ವಾಯುವ್ಯ ದಿಕ್ಕಿನಲ್ಲಿ ಚಲಿಸುವ ಸಾಧ್ಯತೆಯಿದೆ. ಹೀಗಾಗಿ ದಕ್ಷಿಣ ಬಂಗಾಳ ಕೊಲ್ಲಿಯ ಸಮುದ್ರ ಮಟ್ಟದಲ್ಲಿ ತೀವ್ರಗೊಳ್ಳುವ ಸಾಧ್ಯತೆಯಿದೆ. ಇದರ ಪ್ರಭಾವದಿಂದಾಗಿ ನವೆಂಬರ್ 14 ರಿಂದ ದಕ್ಷಿಣ ಒಳನಾಡಿನಲ್ಲಿ ಮಳೆ ಪ್ರಾರಂಭವಾಗುವ ಸಾಧ್ಯತೆಯಿದೆ.
ಇದನ್ನೂ ಓದಿ: Diwali Bonus: ದೀಪಾವಳಿ ಬೋನಸ್ ಕೊಡದ ಮಾಲೀಕನನ್ನೇ ಕೊಂದ ಇಬ್ಬರು ಕಾರ್ಮಿಕರು
ನ.13-14ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು ಹಾಗೂ ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಇರಲಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ರಾಮನಗರ, ಮೈಸೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲೂ ಒಣಹವೆಯೇ ಇರಲಿದೆ.
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 29 ಡಿ.ಸೆ -18ಡಿ.ಸೆ
ಮಂಗಳೂರು: 33 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 29 ಡಿ.ಸೆ – 18 ಡಿ.ಸೆ
ಗದಗ: 31 ಡಿ.ಸೆ – 18 ಡಿ.ಸೆ
ಹೊನ್ನಾವರ: 35 ಡಿ.ಸೆ- 22 ಡಿ.ಸೆ
ಕಲಬುರಗಿ: 34 ಡಿ.ಸೆ – 21 ಡಿ.ಸೆ
ಬೆಳಗಾವಿ: 31 ಡಿ.ಸೆ – 18 ಡಿ.ಸೆ
ಕಾರವಾರ: 35 ಡಿ.ಸೆ – 21 ಡಿ.ಸೆ
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ