Site icon Vistara News

Karnataka Weather : ಬೆಂಗಳೂರು ಸೇರಿ ಹಲವೆಡೆ ಇಂದು ತಾಪಮಾನದಲ್ಲಿ ಏರಿಳಿತ!

Dry weather and Minimum temperatures likely to be rise few places over the karnataka

ಬೆಂಗಳೂರು: ರಾಜ್ಯಾದ್ಯಂತ ಒಣ ಹವೆ (Dry weather) ಮುಂದುವರಿದಿದೆ. ಸೋಮವಾರಂದು ಕೆಲವೆಡೆ ಕನಿಷ್ಠ ಉಷ್ಣಾಂಶವು ಏರಿಕೆ ಆಗಲಿದೆ. ಇದರಿಂದಾಗಿ ಇಷ್ಟು ಇದ್ದ ತಂಪು ವಾತಾವರಣದಲ್ಲಿ ಬಿಸಿ ಗಾಳಿ ಬೀಸಲಿದೆ. ಈ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆಯನ್ನು (karnataka Weather Forecast) ನೀಡಿದೆ.

ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಕನಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 5 ಡಿ.ಸೆ ನಷ್ಟು ಹೆಚ್ಚಳವಾಗಲಿದೆ. ಇದರಿಂದಾಗಿ ಬೀದರ್‌, ಬಾಗಲಕೋಟೆ, ವಿಜಯಪುರ, ಕಲಬುರಗಿ ಹಾಗೂ ಬೆಳಗಾವಿ, ರಾಯಚೂರು, ಧಾರವಾಡ, ಗದಗ, ಹಾವೇರಿ ಸೇರಿದಂತೆ ಕೊಪ್ಪಳ, ಯಾದಗಿರಿಯಲ್ಲಿ ಒಣಹವೆ ಇರಲಿದೆ. ಜತೆಗೆ ಬಿಸಿಲ ತೀವ್ರತೆಯು ಹೆಚ್ಚಿರಲಿದೆ.

ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಹಾಗೂ ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನದಲ್ಲೂ ತಾಪಮಾನದಲ್ಲಿ ಏರಿಳಿತ ಆಗಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ ಸೇರಿದಂತೆ ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರಲ್ಲೂ ಬಿಸಿಲ ಝಳ ಇರಲಿದೆ.

ಇದನ್ನೂ ಓದಿ: Viral News : ಗೋವಾದಲ್ಲಿ ಬಳೆ ಮಾರುವ ಮಹಿಳೆಯ ಇಂಗ್ಲಿಷ್ ಗೆ ಫಾರಿನರೇ ಫಿದಾ!

ಕನಿಷ್ಠ ತಾಪಮಾನದಲ್ಲಿ ಏರಿಕೆ

ಕನಿಷ್ಠ ತಾಪಮಾನದಲ್ಲಿ ಏರಿಳಿತ ಇರಲಿದೆ. ಮುಂದಿನ 48 ಗಂಟೆಯಲ್ಲಿ ರಾಜ್ಯದ ಕೆಲವು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗುವ ಸಾಧ್ಯತೆಯಿದೆ. ಕನಿಷ್ಠ ಉಷ್ಣಾಂಶ ಏರಿಕೆಯಿಂದಾಗಿ ಧಗೆಧಗೆ ವಾತಾವರಣ ಇರಲಿದೆ.

ಬೆಂಗಳೂರಲ್ಲಿ ಮುಂಜಾನೆ ಮುಂಜು

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆ ಇದೆ. ಉಳಿದಂತೆ ಬೆಳಗ್ಗೆ ಆಕಾಶ ನಿರ್ಮಲವಾಗಿರಲಿದ್ದು, ಬಿಸಿಲ ತಾಪ ಏರಿಕೆ ಆಗಲಿದೆ. ಗರಿಷ್ಠ ಉಷ್ಣಾಂಶ 31 ಮತ್ತು ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 31 ಡಿ.ಸೆ -18 ಡಿ.ಸೆ
ಮಂಗಳೂರು: 33 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 32 ಡಿ.ಸೆ – 17 ಡಿ.ಸೆ
ಗದಗ: 34 ಡಿ.ಸೆ – 16 ಡಿ.ಸೆ
ಹೊನ್ನಾವರ: 32 ಡಿ.ಸೆ- 18 ಡಿ.ಸೆ
ಕಲಬುರಗಿ: 34 ಡಿ.ಸೆ – 21 ಡಿ.ಸೆ
ಬೆಳಗಾವಿ: 32 ಡಿ.ಸೆ – 14 ಡಿ.ಸೆ
ಕಾರವಾರ: 34 ಡಿ.ಸೆ – 20 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version