Site icon Vistara News

Karnataka Weather : ಒಳನಾಡಲ್ಲಿ ಸುಡುವ ಸೂರ್ಯ; ಇಂದು ಎಲ್ಲೆಲ್ಲಿ ಮಳೆ?

Dry weather

ಬೆಂಗಳೂರು: ರಾಜ್ಯಾದ್ಯಂತ ಮಳೆ (Rain news) ಅಬ್ಬರ ತಗ್ಗಿದೆ. ಭಾನುವಾರ ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ. ಉಳಿದಂತೆ ಒಳನಾಡಲ್ಲಿ ಒಣಹವೆಯೇ ಮೇಲುಗೈ (Karnataka Weather Forecast) ಸಾಧಿಸಲಿದೆ.

ಮಲೆನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಹಾಸನ ಜಿಲ್ಲೆಯಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿಯಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ ಇದೆ. ಉಳಿದಂತೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಶುಷ್ಕ ಹವಾಮಾನ ಮೇಲುಗೈ ಸಾಧಿಸಲಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಭಾಗದಲ್ಲಿ ಮಳೆ ಮುನ್ಸೂಚನೆ ಇಲ್ಲ. ಬದಲಿಗೆ ಒಣಹವೆ ಇರಲಿದೆ. ಬೆಂಗಳೂರಲ್ಲಿ ಬೆಳಗಿನ ಸಮಯ ಮಂಜು ಮುಸುಕಿದ ವಾತಾವರಣ ಇರಲಿದೆ.

ಇನ್ನು ಕರಾವಳಿ ಹಾಗೂ ಒಳನಾಡಿನ ಕೆಲವು ಕಡೆಗಳಲ್ಲಿ ಮಾತ್ರ ಮಳೆಯಾಗಿರುವ ವರದಿ ಆಗಿದೆ. ಉಡುಪಿ, ಕೋಟದಲ್ಲಿ ತಲಾ 2 ಸೆಂ.ಮೀ, ಪಣಂಬೂರು, ಉಪ್ಪಿನಂಗಡಿ, ಕೊಟ್ಟಿಗೆಹಾರದಲ್ಲಿ ತಲಾ 1ಸೆಂ.ಮೀ ಮಳೆಯಾಗಿದೆ. ವಿಜಯಪುರದಲ್ಲಿ ಕನಿಷ್ಠ ಉಷ್ಣಾಂಶ 18.0 ಡಿ. ಸೆ ದಾಖಲಾಗಿದೆ.

ಇದನ್ನೂ ಓದಿ: ಪ್ರೀತಿ ಒಪ್ಪದ ಯುವತಿ ಫೋಟೊ ಅಶ್ಲೀಲವಾಗಿ ಎಡಿಟ್‌ ಮಾಡಿದ ಬೆಳಗಾವಿ ಯುವಕ; ಡೀಪ್‌ಫೇಕ್ ಕೇಸ್!

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 30 ಡಿ.ಸೆ -18ಡಿ.ಸೆ
ಮಂಗಳೂರು: 33 ಡಿ.ಸೆ – 24 ಡಿ.ಸೆ
ಚಿತ್ರದುರ್ಗ: 30 ಡಿ.ಸೆ – 19 ಡಿ.ಸೆ
ಗದಗ: 31 ಡಿ.ಸೆ – 20 ಡಿ.ಸೆ
ಹೊನ್ನಾವರ: 34 ಡಿ.ಸೆ- 24 ಡಿ.ಸೆ
ಕಲಬುರಗಿ: 34 ಡಿ.ಸೆ – 23 ಡಿ.ಸೆ
ಬೆಳಗಾವಿ: 30 ಡಿ.ಸೆ – 20 ಡಿ.ಸೆ
ಕಾರವಾರ: 34 ಡಿ.ಸೆ – 24 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version