ಬೆಂಗಳೂರು: ಬೆಂಗಳೂರಿನ ಕೆಲವೆಡೆ ಮುಂಜಾನೆ ಹೊತ್ತು ದಟ್ಟವಾದ ಮಂಜು ಆವರಿಸಿದರೆ, ಚಳಿ ವಾತಾವರಣವು ಜನರನ್ನು ಗಡಗಡ ನಡುಗುವಂತೆ (Karnataka weather Forecast) ಮಾಡಿದೆ. ರಾಜ್ಯಾದ್ಯಂತ ಮುಂದಿನ ಐದು ದಿನಗಳು ಶುಷ್ಕ ವಾತಾವರಣವೇ (Dry weather) ಮುಂದುವರಿಯಲಿದೆ.
ಮುಂದಿನ 48 ಗಂಟೆಯಲ್ಲಿ ತಾಪಮಾನ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಮುಖ್ಯವಾಗಿ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಯಿದೆ. ಇದರಿಂದ ಬಿಸಿಲುನಾಡು ಉತ್ತರ ಕರ್ನಾಟಕದ ಹಲವೆಡೆ ಶೀತ ಗಾಳಿಯು ಬೀಸಲಿದೆ.
ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ ಸೇರಿದಂತೆ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ತಾಪಮಾನ ಇಳಿಕೆ ಆಗಲಿದೆ. ಇದರಿಂದಾಗಿ ಥಂಡಿ ವಾತಾವರಣ ಇರಲಿದೆ.
ಇದನ್ನೂ ಓದಿ: Theft Case : ಫ್ರೀ ಬಸ್ ಎಫೆಕ್ಟ್;15 ತೊಲೆ ಬಂಗಾರ ಎಗರಿಸಿದ ಚಲಾಕಿ ಕಳ್ಳರು
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ ಮತ್ತು ಮೈಸೂರು, ರಾಮನಗರ, ಮಂಡ್ಯ, ತುಮಕೂರು, ವಿಜಯನಗರದಲ್ಲೂ ಶುಷ್ಕ ವಾತಾವರಣ ಇರಲಿದೆ. ಜತೆಗೆ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಮಲೆನಾಡಿನ ಚಿಕ್ಕಮಗಳೂರು, ಹಾಸನ, ಶಿವಮೊಗ್ಗದಲ್ಲಿ ಒಣಹವೆ ಮೇಲುಗೈ ಸಾಧಿಸಲಿದೆ.
ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದರೆ, ಮಧ್ಯಾಹ್ನ ಬಿಸಿಲ ವಾತಾವರಣ ಇರಲಿದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ದಟ್ಟ ಮಂಜು ಆವರಿಸಲಿದೆ. ರಾತ್ರಿಯಾಗುತ್ತಿದ್ದಂತೆ ಗಾಢ ಚಳಿಯು ಕಾಡಲಿದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 16 ಡಿಗ್ರಿ ಸೆಲ್ಸಿಯಸ್ ಇರಲಿದೆ
ಇದನ್ನೂ ಓದಿ: A Beginner’s Guide to Working Out: ವ್ಯಾಯಾಮಕ್ಕೆ ಹೊಸಬರೇ? ನಿಮಗೆಂಥದ್ದು ಬೇಕು?
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 29 ಡಿ.ಸೆ -17 ಡಿ.ಸೆ
ಮಂಗಳೂರು: 34 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 29 ಡಿ.ಸೆ – 15 ಡಿ.ಸೆ
ಗದಗ: 30 ಡಿ.ಸೆ – 14 ಡಿ.ಸೆ
ಹೊನ್ನಾವರ: 36 ಡಿ.ಸೆ- 20 ಡಿ.ಸೆ
ಕಲಬುರಗಿ: 32 ಡಿ.ಸೆ – 17 ಡಿ.ಸೆ
ಬೆಳಗಾವಿ: 30 ಡಿ.ಸೆ – 14 ಡಿ.ಸೆ
ಕಾರವಾರ: 36 ಡಿ.ಸೆ – 21 ಡಿ.ಸೆ
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ