ಬೆಂಗಳೂರು: ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ (Rain News) ಸಾಧ್ಯತೆ ಇದ್ದು, ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆಯೇ (Karnataka weather Forecast) ಮುಂದುವರಿಯಲಿದೆ. ಇಂದು ಬಹುತೇಕ ದಕ್ಷಿಣ, ಉತ್ತರ ಒಳನಾಡು ಹಾಗೂ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಒಣಹವೆಯೇ (Dry weather) ಇರಲಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ ಹಾಗು ಮಂಡ್ಯ, ರಾಮನಗರ, ತುಮಕೂರಿನ ಕೆಲವೆಡೆ ಮಳೆಯ ಸಾಧ್ಯತೆ ಇದೆ.
ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿ ಮಲೆನಾಡಿನ ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನದಲ್ಲಿ ಬಿಸಿಲಿನ ವಾತಾವರಣ ಇರಲಿದೆ. ದಕ್ಷಿಣ ಒಳನಾಡಿನ ವಿಜಯನಗರ, ಮೈಸೂರು, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿಯಲ್ಲಿ ಒಣಹವೆ ಇರಲಿದೆ.
ಜತೆಗೆ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ ಹಾಗೂ ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಬಿಸಿಲು ಇರಲಿದ್ದು, ಶುಷ್ಕ ವಾತಾವರಣವೇ ಮುಂದುವರಿಯಲಿದೆ.
ಬೆಂಗಳೂರಿಗೆ ಮಳೆ ಸೂಚನೆ ಇಲ್ಲದಿದ್ದರೂ, ಭಾಗಶಃ ಮೋಡ ಕವಿದ ವಾತವರಣ ಇರಲಿದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆ ಇದೆ. ಇದರಿಂದಾಗಿ ಸಂಜೆ ಆಗುತ್ತಿದ್ದಂತೆ ಥಂಡಿ ವಾತಾವರಣ ಇರಲಿದೆ. ಗರಿಷ್ಠ ಉಷ್ಣಾಂಶ 26 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 26 ಡಿ.ಸೆ -19 ಡಿ.ಸೆ
ಮಂಗಳೂರು: 33 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 29 ಡಿ.ಸೆ – 17 ಡಿ.ಸೆ
ಗದಗ: 30 ಡಿ.ಸೆ – 15ಡಿ.ಸೆ
ಹೊನ್ನಾವರ: 35 ಡಿ.ಸೆ- 22 ಡಿ.ಸೆ
ಕಲಬುರಗಿ: 31 ಡಿ.ಸೆ – 18 ಡಿ.ಸೆ
ಬೆಳಗಾವಿ: 30 ಡಿ.ಸೆ – 15 ಡಿ.ಸೆ
ಕಾರವಾರ: 36 ಡಿ.ಸೆ – 22 ಡಿ.ಸೆ
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ