Site icon Vistara News

Karnataka Weather : ಮುಂದಿನ 24 ಗಂಟೆವರೆಗೂ ರಾಜ್ಯದಲ್ಲಿ ತಲೆ ಬಿಸಿ!

Karnataka weather Forecast

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಇರಲಿದೆ. ಮುಂದಿನ 48 ಗಂಟೆಯಲ್ಲಿ ರಾಜ್ಯಾದ್ಯಂತ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಬೆಂಗಳೂರಿಗಿಲ್ಲ ಮಳೆ ಅಲರ್ಟ್‌

ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಮುಸುಕುವ ಬಹಳಷ್ಟು ಸಾಧ್ಯತೆ ಇರುತ್ತದೆ. ಆದರೆ ಬೆಳಗ್ಗೆ ಬಿಸಿಲಿನಿಂದ ಕೂಡಿರಲಿದೆ. ಗರಿಷ್ಠ ಉಷ್ಣಾಂಶ 31 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Dasara 2023 : ಸ್ತಬ್ಧ ಚಿತ್ರಗಳಿಗೆ ಫೈನಲ್ ಟಚ್; ಜಂಬೂ ಸವಾರಿಯಲ್ಲಿ ಗ್ಯಾರಂಟಿ ಯೋಜನೆಗಳ ಮೆರವಣಿಗೆ

ಉಷ್ಣಾಂಶ ಏರಿಕೆ

ಕರಾವಳಿಯ ಉಡುಪಿ, ಉತ್ತರ ಕನ್ನಡ ಹಾಗೂ ಉತ್ತರ ಒಳನಾಡಿನ ಬಾಗಲಕೋಟೆ, ಧಾರವಾಡ, ಗದಗ, ರಾಯಚೂರು, ಕೊಪ್ಪಳ ಸೇರಿದಂತೆ ದಕ್ಷಿಣ ಒಳನಾಡಿನ ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ತುಮಕೂರು, ಬಳ್ಳಾರಿ, ವಿಜಯನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 2-3 ಡಿಗ್ರಿ ಹೆಚ್ಚಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 1-2 ಡಿಗ್ರಿ ಹೆಚ್ಚಾಗುವ ಸಾಧ್ಯತೆಯಿದೆ.

ಭಾನುವಾರ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು. ಕ್ಯಾಸಲ್ ರಾಕ್ ಮತ್ತು ಭಾಗಮಂಡಲದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ಗರಿಷ್ಠ ಉಷ್ಣಾಂಶ 36.6 ಡಿ.ಸೆ ಶಿರಾಳಿಯಲ್ಲಿ ಹಾಗೂ ಕಡಿಮೆ ಉಷ್ಣಾಂಶ 15.6 ಡಿ.ಸೆ. ಬೀದರ್‌ನಲ್ಲಿ ದಾಖಲಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version