ಬೆಂಗಳೂರು: ಬುಧವಾರ (ಡಿ.13) ರಾಜ್ಯಾದ್ಯಂತ ಒಣಹವೆ (Dry weather) ಇದ್ದು, ವಿಜಯಪುರದಲ್ಲಿ ಕಡಿಮೆ ಉಷ್ಣಾಂಶ 11.8 ಡಿ.ಸೆ ದಾಖಲಾಗಿದೆ. ಮುಂದಿನ 24 ಗಂಟೆಯಲ್ಲಿ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆಯೇ ಮುಂದುವರಿಯಲಿದೆ.
ಡಿ.15ರಂದು ಭಾಗಶಃ ದಕ್ಷಿಣ, ಉತ್ತರ ಒಳನಾಡು ಹಾಗೂ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಒಣಹವೆಯೇ ಮುಂದುವರಿಯಲಿದೆ. ಡಿ.16ರಂದು ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಯಾವುದೇ ಮಳೆ ಸೂಚನೆ ಇಲ್ಲ, ಬದಲಿಗೆ ಶುಷ್ಕ ವಾತಾವರಣವೇ ಇರಲಿದೆ.
ಉಳಿದಂತೆ ಮಲೆನಾಡಿನ ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಸೇರಿದಂತೆ ದಕ್ಷಿಣ ಒಳನಾಡಿನ ವಿಜಯನಗರ, ಮೈಸೂರು, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿಯಲ್ಲಿ ಒಣಹವೆ ಇರಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ ಹಾಗೂ ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಬಿಸಿಲು ಇರಲಿದ್ದು, ಶುಷ್ಕ ವಾತಾವರಣವೇ ಮುಂದುವರಿಯಲಿದೆ.
ಇದನ್ನೂ ಓದಿ: ಡಿ.18ರಿಂದ ಪ್ರವಾಸಿಗರಿಗೆ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ನಿರ್ಬಂಧ!
8 ಜಿಲ್ಲೆಗಳಿಗೆ ಮಳೆ ಸೂಚನೆ
ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ ಹಾಗು ಮಂಡ್ಯ, ರಾಮನಗರ, ತುಮಕೂರಲ್ಲಿ ಮಳೆಯ ಸಿಂಚನವಾಗಲಿದೆ.
ಬೆಂಗಳೂರು ಥಂಡಿ ವಾತಾವರಣ ಜತೆಗೆ ಮೋಡ ಕವಿದ ವಾತಾವರಣ
ಬೆಂಗಳೂರಿಗೆ ಮಳೆ ಸೂಚನೆ ಇಲ್ಲದಿದ್ದರೂ, ಭಾಗಶಃ ಮೋಡ ಕವಿದ ವಾತವರಣ ಇರಲಿದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆ ಇದೆ. ಇದರಿಂದಾಗಿ ಸಂಜೆ ಆಗುತ್ತಿದ್ದಂತೆ ಥಂಡಿ ವಾತಾವರಣ ಇರಲಿದೆ. ಗರಿಷ್ಠ ಉಷ್ಣಾಂಶ 26 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ