ಬೆಂಗಳೂರು: ಬೆಳಗ್ಗೆ ಚಳಿಯ ವಾತಾವರಣದೊಂದಿಗೆ ಮಂಜು ಬೀಳುತ್ತದೆ. ಹಗಲಿಡೀ ಕೆಲವೆಡೆ ಎಳೆ ಬಿಸಿಲು ಇದ್ದರೆ, ಹಲವೆಡೆ ಉರಿ ಬಿಸಿಲು ಕಿರಿಕಿರಿಯನ್ನುಂಟು (Karnataka Weather Forecast) ಮಾಡಲಿದೆ. ರಾಜ್ಯದಲ್ಲಿಂದು ಒಣಹವೆ (Dry weather) ಮುಂದುವರಿಯಲಿದೆ. ಈಗ ಇಬ್ಬನಿ ಬೀಳಲು ಆರಂಭವಾಗಿದ್ದು, ಇದು ಮಳೆ (Rain news) ದೂರವಾದ ಲಕ್ಷಣ ಎಂದು ಹೇಳಲಾಗುತ್ತಿದೆ.
ಬಹುತೇಕ ಜಿಲ್ಲೆಗಳಲ್ಲಿ ಶುಷ್ಕ ವಾತಾವರಣವೇ ಮೇಲುಗೈ ಸಾಧಿಸಲಿದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ. ಮಲೆನಾಡಿನ ಕೊಡಗು, ದಕ್ಷಿಣ ಒಳನಾಡಿನ ಚಾಮರಾಜನಗರದಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಇಲ್ಲೆಲ್ಲ ಒಣಹವೆ
ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನದಲ್ಲಿ ಶುಷ್ಕ ವಾತಾವರಣ ಇರಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ ಹಾಗೂ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಇರಲಿದೆ. ಇನ್ನು ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ ಹಾಗೂ ಮಂಡ್ಯ, ಮೈಸೂರು, ರಾಮನಗರ, ತುಮಕೂರಲ್ಲಿ ಮಳೆ ಸೂಚನೆ ಇಲ್ಲ. ಬದಲಿಗೆ ಶುಷ್ಕ ವಾತಾವರಣವೇ ಇರಲಿದೆ.
ಇದನ್ನೂ ಓದಿ: Winter Wedding Fashion: ವೆಡ್ಡಿಂಗ್ ಫ್ಯಾಷನ್‌ಗೆ ಲಗ್ಗೆ ಇಟ್ಟ ಎಥ್ನಿಕ್ ಲೇಯರ್ ಕೋ ಆರ್ಡ್ ಸೂಟ್ !
ಬೆಂಗಳೂರಲ್ಲಿ ಮುಂಜಾನೆ ಮಂಜು
ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕಲಿದೆ. ಗರಿಷ್ಠ ಉಷ್ಣಾಂಶ 27 ಹಾಗೂ ಕನಿಷ್ಠ ಉಷ್ಣಾಂಶ 17 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 26 ಡಿ.ಸೆ -17 ಡಿ.ಸೆ
ಮಂಗಳೂರು: 34 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 31 ಡಿ.ಸೆ – 16 ಡಿ.ಸೆ
ಗದಗ: 31 ಡಿ.ಸೆ – 18 ಡಿ.ಸೆ
ಹೊನ್ನಾವರ: 35 ಡಿ.ಸೆ- 23 ಡಿ.ಸೆ
ಕಲಬುರಗಿ: 32 ಡಿ.ಸೆ – 19 ಡಿ.ಸೆ
ಬೆಳಗಾವಿ: 29 ಡಿ.ಸೆ – 18 ಡಿ.ಸೆ
ಕಾರವಾರ: 36 ಡಿ.ಸೆ – 24 ಡಿ.ಸೆ
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ