Site icon Vistara News

Karnataka Weather : ಬೆಂಗಳೂರು ಸೇರಿದಂತೆ ಹಲವೆಡೆ ಇನ್ನೆರಡು ದಿನ ಉರಿ ಬಿಸಿಲು!

Karnataka weather forecast

ಬೆಂಗಳೂರು: ಮನೆಯಿಂದ ಹೊರಗೆ ಕಾಲಿಟ್ಟರೆ ಬಿಸಿಲ ಧಗೆ, ಮನೆಯೊಳಗೆ ಇದ್ದರೆ ಉರಿ ಉರಿ (dry weather) ವಾತಾವರಣ. ಸದ್ಯ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಗಳಿಗೆಗೊಂದು ವಾತಾವರಣವೂ ಜನರಿಗೆ ಕಿರಿಕಿರಿಯನ್ನುಂಟು ಮಾಡಿದೆ. ಮುಂದಿನ 24 ಗಂಟೆಯಲ್ಲಿ ರಾಜ್ಯಾದ್ಯಂತ ಒಣ ಹವೆ ವಾತಾವರಣವೇ (karnataka weather forecast) ಇರಲಿದೆ. ಕೆಲವೆಡೆ ಗರಿಷ್ಠ ಉಷ್ಣಾಂಶ ಹೆಚ್ಚಾದರೆ, ಉಳಿದೆಡೆ ಕನಿಷ್ಠ ಉಷ್ಣಾಂಶ ಕಡಿಮೆ ಆಗುವ ಸಾಧ್ಯತೆ ಇದೆ.

ಬೆಂಗಳೂರು ನಗರದಲ್ಲಿ ಕೆಲವೊಮ್ಮೆ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಮುಸುಕುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ : Tiger Nail : ದತ್ತಪೀಠದ ಶಾ ಖಾದ್ರಿ ಕುಟುಂಬಕ್ಕೂ ಹುಲಿ ಚರ್ಮ ಸಂಕಟ ; ಕ್ರಮಕ್ಕೆ ಶ್ರೀರಾಮ ಸೇನೆ ಆಗ್ರಹ

ಈ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ ಏರಿಕೆ

ಕರಾವಳಿಯ ಉತ್ತರ ಕನ್ನಡ ಹಾಗೂ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ ಸೇರಿದಂತೆ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ಹಾಸನ ಮತ್ತು ವಿಜಯನಗರದ ಒಂದೆರಡು ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 2-3 ಡಿಗ್ರಿ ಹೆಚ್ಚಾಗುವ ಸಾಧ್ಯತೆಯಿದೆ.

ಇಲ್ಲೆಲ್ಲ ಕನಿಷ್ಠ ಉಷ್ಣಾಂಶ

ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಧಾರವಾಡ, ಗದಗ, ರಾಯಚೂರು, ವಿಜಯಪುರ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆ ಇರುವ ಸಾಧ್ಯತೆಯಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 30 ಡಿ.ಸೆ – 18 ಡಿ.ಸೆ
ಮಂಗಳೂರು: 31 ಡಿ.ಸೆ – 24 ಡಿ.ಸೆ
ಚಿತ್ರದುರ್ಗ: 32 ಡಿ.ಸೆ – 19 ಡಿ.ಸೆ
ಗದಗ: 33 ಡಿ.ಸೆ – 19 ಡಿ.ಸೆ
ಹೊನ್ನಾವರ: 35 ಡಿ.ಸೆ- 22 ಡಿ.ಸೆ
ಕಲಬುರಗಿ: 35 ಡಿ.ಸೆ – 21 ಡಿ.ಸೆ
ಬೆಳಗಾವಿ: 32 ಡಿ.ಸೆ – 17 ಡಿ.ಸೆ
ಕಾರವಾರ: 36 ಡಿ.ಸೆ – 24 ಡಿ.ಸೆ

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version