Site icon Vistara News

karnataka weather forecast : ಚಿಕ್ಕಮಗಳೂರಲ್ಲಿ ಸಂಜೆಯಿಂದ ಬಿರುಮಳೆ; ನಾಳೆವರೆಗೂ 8 ಜಿಲ್ಲೆಗಳಿಗೆ ಅಲರ್ಟ್‌

Heavy rain in Chikmagaluru

ಚಿಕ್ಕಮಗಳೂರು/ಬೆಂಗಳೂರು: ಶನಿವಾರ ಕಾಫಿನಾಡು ಚಿಕ್ಕಮಗಳೂರಲ್ಲಿ ಸುತ್ತಮುತ್ತ ಭಾರಿ (karnataka weather forecast) ಮಳೆಯಾಗಿದೆ. ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್, ಕೊಟ್ಟಿಗೆಹಾರ, ಬಣಕಲ್, ದೇವರು ಮನೆ, ಬಾಳೂರು, ಮೂಡಿಗೆರೆಯಲ್ಲಿ ವ್ಯಾಪಕ (rain news) ಮಳೆಯಾಗುತ್ತಿದೆ.

ಭಾರೀ ಮಳೆ ಜತೆಗೆ ಗಾಳಿ ಅಬ್ಬರವು ಜೋರಾಗಿದ್ದು, ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಗ್ರಾಮೀಣ ಭಾಗದ ಹಲವೆಡೆ ಮರಗಳು ಮುರಿದು ಬೀಳುತ್ತಿವೆ. ವಿದ್ಯುತ್ ತಂತಿ ಮೇಲೆ ಮರ ಬಿದ್ದ ಪರಿಣಾಮ ವಿದ್ಯುತ್‌ ಕಡಿತಗೊಂಡಿದೆ.

ಮುಂದಿನ 24 ಗಂಟೆಯಲ್ಲಿ ಕರಾವಳಿಯಲ್ಲಿ ಚದುರಿದಂತೆ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: CCB Raid : ಅವಧಿ ಮೀರಿದ ಔಷಧಿ ಸೇಲ್‌ ಮಾಡುತ್ತಿದ್ದ ತಂದೆ-ಮಗ; ಫಾರ್ಮಸಿ ಮೇಲೆ ಸಿಸಿಬಿ ದಾಳಿ

ದಕ್ಷಿಣ ಒಳನಾಡಿನ ಚಿತ್ರದುರ್ಗ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂಬಾ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ. ಉಳಿದ ಭಾಗಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬೆಳಗಾವಿಯಲ್ಲಿ ಅತಿ ಹೆಚ್ಚು ಮಳೆಯಾದರೆ, ಬೀದರ್, ಕಲಬುರಗಿ, ವಿಜಯಪುರ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಕಡಿಮೆ ಮಳೆ ಸುರಿಯಲಿದೆ. ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನದಲ್ಲಿ ಮಳೆ ಸೂಚನೆ ಇದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಆರೆಂಜ್ ಅಲರ್ಟ್: ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ನೀಡಿದೆ.

ಯೆಲ್ಲೋ ಅಲರ್ಟ್: ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version