ಬೆಂಗಳೂರು: ನೈರುತ್ಯ ಮುಂಗಾರು ಪ್ರತ್ಯೇಕ ಕಡೆಗಳಲ್ಲಿ (karnataka weather forecast) ಚುರುಕುಗೊಂಡಿದೆ. ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ (Rain News ) ಮುನ್ಸೂಚನೆಯನ್ನು ಹವಾಮಾನ ಇಲಾಖೆ (weather report) ನೀಡಿದೆ.
ಈ ಎರಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
ಸೆ.30ರಂದು ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಪ್ರತ್ಯೇಕ ಕಡೆಗಳಲ್ಲಿ ಅತಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಐಎಂಡಿ ಆರೆಂಜ್ ಅಲರ್ಟ್ ನೀಡಿದೆ.
ಯೆಲ್ಲೋ ಅಲರ್ಟ್
ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಕೋಲಾರ ಮತ್ತು ತುಮಕೂರು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಐಎಂಡಿ ಯೆಲ್ಲೋ ಅಲರ್ಟ್ ನೀಡಿದೆ.
ಇದನ್ನೂ ಓದಿ: Karnataka Bandh : ರಾಜ್ಯಾದ್ಯಂತ ಕಾವೇರಿ ಕಿಚ್ಚು ಹೇಗಿತ್ತು? ಇಲ್ಲಿದೆ ಫೋಟೊ ಝಲಕ್
ದಕ್ಷಿಣ ಒಳನಾಡಲ್ಲಿ ಸಣ್ಣ ಮಳೆ
ದಕ್ಷಿಣ ಒಳನಾಡಿನ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಲ್ಲಿ ಸಾಮಾನ್ಯವಾಗಿ ಬೆಳಗ್ಗೆ ಬಿಸಿಲಿನಿಂದ ಕೂಡಿದರೆ, ಮಧ್ಯಾಹ್ನ ಮೋಡ ಕವಿದ ವಾತಾವರಣ ಇರಲಿದೆ. ರಾತ್ರಿ ಜಿಟಿ ಜಿಟಿ ಮಳೆಯಾಗಲಿದೆ.
ಇಲ್ಲೆಲ್ಲ ಲಘು ಮಳೆಯಷ್ಟೇ
ಬೀದರ್ ಜಿಲ್ಲೆಯ ಹಲವೆಡೆ ಭಾರೀ ಮಳೆಯಾಗುವ ಸಂಭವವಿದೆ. ಕಲಬುರಗಿ, ಬೆಳಗಾವಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಶಿವಮೊಗ್ಗ ಮತ್ತು ಚಿಕ್ಕಮಗಳೂರು ಭಾಗದಲ್ಲಿ ವ್ಯಾಪಕವಾಗಿ ಅತಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ