ಬೆಂಗಳೂರು: ನೈರುತ್ಯ ಮುಂಗಾರು ಹಲವೆಡೆ (karnataka weather forecast) ಚುರುಕುಗೊಂಡಿದೆ. ಕರಾವಳಿ ಸೇರಿದಂತೆ ಮಲೆನಾಡು ಹಾಗೂ ಒಳನಾಡಿನಲ್ಲಿ ವ್ಯಾಪಕ ಮಳೆಯಾಗುವ (Rain News ) ಮುನ್ಸೂಚನೆಯನ್ನು ಹವಾಮಾನ ಇಲಾಖೆ (weather report) ನೀಡಿದೆ.
ಸೆ.30 ಹಾಗೂ ಅ.1ರಂದು ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಪ್ರತ್ಯೇಕ ಕಡೆಗಳಲ್ಲಿ ಅತಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಐಎಂಡಿ ಆರೆಂಜ್ ಅಲರ್ಟ್ ನೀಡಿದೆ. ಜತೆಗೆ ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಕೋಲಾರ ಮತ್ತು ತುಮಕೂರು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ನೀಡಿದೆ.
ದಕ್ಷಿಣ ಒಳನಾಡಿನ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಲ್ಲಿ ಸಾಮಾನ್ಯವಾಗಿ ಬೆಳಗ್ಗೆ ಬಿಸಿಲಿನಿಂದ ಕೂಡಿದರೆ, ಮಧ್ಯಾಹ್ನ ಮೋಡ ಕವಿದ ವಾತಾವರಣ ಇರಲಿದೆ. ರಾತ್ರಿ ಜಿಟಿ ಜಿಟಿ ಮಳೆಯಾಗಲಿದೆ.
ಕಲಬುರಗಿ, ಬೆಳಗಾವಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣವಾಗಿ ಮಳೆ ಸುರಿಯಲಿದೆ. ಶಿವಮೊಗ್ಗ ಮತ್ತು ಚಿಕ್ಕಮಗಳೂರು ಭಾಗದಲ್ಲಿ ವ್ಯಾಪಕವಾಗಿ ಅತಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕೊಡಗು ಮತ್ತು ಹಾಸನದಲ್ಲಿ ಜಿಟಿ ಜಿಟಿ ಮಳೆಯಾಗಲಿದೆ.
ಇದನ್ನೂ ಓದಿ: Karnataka Bandh: ಬರಿದಾಗುತ್ತಿರುವ ಕಾವೇರಿಗಾಗಿ ಹೋರಾಟ ಮಾಡಬೇಡಿ ಅಂದ್ರು ಸದ್ಗುರು ಜಗ್ಗಿ ವಾಸುದೇವ!
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 28 ಡಿ.ಸೆ – 20 ಡಿ.ಸೆ
ಮಂಗಳೂರು: 27 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 30 ಡಿ.ಸೆ – 21 ಡಿ.ಸೆ
ಗದಗ: 31 ಡಿ.ಸೆ – 21 ಡಿ.ಸೆ
ಹೊನ್ನಾವರ: 30 ಡಿ.ಸೆ- 24 ಡಿ.ಸೆ
ಕಲಬುರಗಿ: 33 ಡಿ.ಸೆ – 23 ಡಿ.ಸೆ
ಬೆಳಗಾವಿ: 27 ಡಿ.ಸೆ – 21 ಡಿ.ಸೆ
ಕಾರವಾರ: 30 ಡಿ.ಸೆ – 24 ಡಿ.ಸೆ
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ