Site icon Vistara News

Karnataka Weather Forecast : ಇನ್ನೊಂದು ವಾರ ಈ ಜಿಲ್ಲೆಗಳು ಕಾದ ಕಾವಲಿ; ಬೆಂಗಳೂರಲ್ಲಿ ಮರೆಯಾಗುವ ಸೂರ್ಯ

Karnataka Weather Forecast

ಬೆಂಗಳೂರು: ನೈರುತ್ಯ ಮುಂಗಾರು ರಾಜ್ಯಾದ್ಯಂತ ದುರ್ಬಲವಾಗಿದೆ. ಒಂದೆರಡು ಕಡೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದ್ದರೆ, ತಾಪಮಾನ ಏರಿಕೆ (Rising temperatures) ಆಗಲಿದೆ. ಚಿಕ್ಕಮಗಳೂರಿನ ಕೊಟ್ಟಿಗೆಹಾರದಲ್ಲಿ 2 ಸೆಂ.ಮೀ ಮಳೆಯಾಗಿರುವ ವರದಿ (Karnataka Weather Forecast) ಆಗಿದೆ. ಗರಿಷ್ಠ ಉಷ್ಣಾಂಶ 32.0 ಡಿ.ಸೆ. ಕಲಬುರಗಿಯಲ್ಲಿ ದಾಖಲಾಗಿದರೆ, ಕಡಿಮೆ ಉಷ್ಣಾಂಶ 14.8 ಡಿ.ಸೆ. ಬಾಗಲಕೋಟೆಯಲ್ಲಿ ದಾಖಲಾಗಿದೆ.

ಮುಂದಿನ 24 ಗಂಟೆಯಲ್ಲಿ ರಾಜ್ಯಾದ್ಯಂತ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದರೆ, ಉಳಿದೆಡೆ ಚದುರಿದಂತೆ ಪ್ರತ್ಯೇಕವಾಗಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ರಾಮನಗರ, ತುಮಕೂರು, ಕೋಲಾರ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಉಳಿದೆಡೆ ಶುಷ್ಕ ವಾತಾವರಣವೇ ಮೇಲುಗೈ ಸಾಧಿಸಲಿದೆ.

ಉತ್ತರ ಒಳನಾಡಿನ ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಲಘು ಮಳೆಯಾದರೆ, ಗದಗ, ವಿಜಯನಗರ, ಬಳ್ಳಾರಿ, ಕೊಪ್ಪಳ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು. ಹಾವೇರಿ, ರಾಯಚೂರು ಮತ್ತು ವಿಜಯಪುರದಲ್ಲೂ ಸಣ್ಣ ಪ್ರಮಾಣದಲ್ಲಿ ಮಳೆ ಸುರಿಯಬಹುದು. ಉಳಿದ ಭಾಗಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆಯಿದೆ.

ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Heart Attack : ಜೀವಾ ಕ್ಷಣಿಕ ಕಣೋ!; ಔಷಧ ಖರೀದಿಗೆ ಮೆಡಿಕಲ್‌ಗೆ ಬಂದಾಗಲೇ ಹೃದಯಾಘಾತ

ತಾಪಮಾನ ಏರಿಕೆ ಎಚ್ಚರಿಕೆ

ಕಲಬುರಗಿ, ಬೆಳಗಾವಿ, ಕೊಪ್ಪಳ, ಹಾವೇರಿಯ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನ 1-2 ಡಿಗ್ರಿ ಸಾಮಾನ್ಯಕ್ಕಿಂತ ಹೆಚ್ಚಿರುವ ಸಾಧ್ಯತೆಯಿದೆ.

ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರುತ್ತದೆ. ಸಂಜೆ ಅಥವಾ ರಾತ್ರಿಯ ಹೊತ್ತು ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 30 ಡಿ.ಸೆ – 21 ಡಿ.ಸೆ
ಮಂಗಳೂರು: 30 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 30 ಡಿ.ಸೆ – 21 ಡಿ.ಸೆ
ಗದಗ: 29 ಡಿ.ಸೆ – 21 ಡಿ.ಸೆ
ಹೊನ್ನಾವರ: 30 ಡಿ.ಸೆ- 23 ಡಿ.ಸೆ
ಕಲಬುರಗಿ: 34 ಡಿ.ಸೆ – 24 ಡಿ.ಸೆ
ಬೆಳಗಾವಿ: 29 ಡಿ.ಸೆ – 20 ಡಿ.ಸೆ
ಕಾರವಾರ: 32 ಡಿ.ಸೆ – 24 ಡಿ.ಸೆ

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version