ಬೆಂಗಳೂರು: ರಾಜ್ಯದಲ್ಲಿ ಗಳಿಗೆಗೊಂದು ವಾತಾವರಣವು ಜನರ ತಲೆ ಬಿಸಿ ಮಾಡಿದೆ. ರಾಜ್ಯದಲ್ಲಿ ಮಳೆ ಕೈಕೊಟ್ಟಿದ್ದು (karnataka weather forecast) ಸೂರ್ಯನ ಶಾಖಕ್ಕೆ ಜನರು ಹೈರಾಣಾಗಿದ್ದಾರೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನ ಏರಿಕೆ (Temperature warning) ಆಗಲಿದೆ.
ದಕ್ಷಿಣ ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಉಷ್ಣಾಂಶ ಏರಿಕೆ ಆಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ. ಉತ್ತರ ಒಳನಾಡಿನ ಕಲಬುರಗಿ, ಕೊಪ್ಪಳ, ಬಾಗಲಕೋಟೆಯ, ವಿಜಯಪುರ ಹಾಗೂ ದಕ್ಷಿಣ ಒಳನಾಡಿನ ಮಂಡ್ಯ, ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 1-2 ಡಿಗ್ರಿಗಳಷ್ಟು ಹೆಚ್ಚಾಗುವ ಸಾಧ್ಯತೆಯಿದೆ.
ಇಲ್ಲೆಲ್ಲ ಮಳೆ ಮುನ್ಸೂಚನೆ
ದಕ್ಷಿಣ ಒಳನಾಡಿನ ತುಮಕೂರು, ಚಿತ್ರದುರ್ಗ ಮತ್ತು ದಾವಣಗೆರೆ ಸೇರಿದಂತೆ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದ ಭಾಗಗಳಲ್ಲಿ ಶುಷ್ಕ ವಾತಾವರಣವೇ ಮೇಲುಗೈ ಸಾಧಿಸಲಿದೆ.
ಉತ್ತರ ಒಳನಾಡಿನ ಹಾವೇರಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಪ್ರತ್ಯೇಕ ಕಡೆ ಭಾರಿ ಮಳೆಯಾಗಬಹುದು. ಗದಗ, ಬೆಳಗಾವಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಕೊಪ್ಪಳ ಮತ್ತು ಬಾಗಲಕೋಟೆಯಲ್ಲಿ ಮಳೆ ನಿರೀಕ್ಷೆ ಇದ್ದು, ಉಳಿದ ಭಾಗಗಳಲ್ಲಿ ಒಣಹವೆ ಇರಲಿದೆ.
ಮಲೆನಾಡಿನ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಅತಿ ಸಣ್ಣ ಮಳೆಯಾಗಬಹುದು. ಕೊಡಗು ಮತ್ತು ಹಾಸನದಲ್ಲಿ ಲಘುವಾಗಿ ಮಳೆ ಬರಬಹುದು. ಆದರೆ ಕರಾವಳಿಯ ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಭಾರೀ ಮಳೆಯಾಗುವ ಸಂಭವವಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇದ್ದರೂ ಧಗೆ ಪ್ರಮಾಣ ಹೆಚ್ಚಾಗಿರಲಿದೆ. ಆಗಾಗ ಬಿರು ಬಿಸಿಲು ಜತೆಗೆ ದಿಢೀರ್ ಮೋಡ ಮುಸುಕಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿಯಂದು ಗುಡುಗಿನಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 29 ಡಿ.ಸೆ – 20 ಡಿ.ಸೆ
ಮಂಗಳೂರು: 30 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 30 ಡಿ.ಸೆ – 21 ಡಿ.ಸೆ
ಗದಗ: 30 ಡಿ.ಸೆ – 21 ಡಿ.ಸೆ
ಹೊನ್ನಾವರ: 30 ಡಿ.ಸೆ- 23 ಡಿ.ಸೆ
ಕಲಬುರಗಿ: 34 ಡಿ.ಸೆ – 24 ಡಿ.ಸೆ
ಬೆಳಗಾವಿ: 29 ಡಿ.ಸೆ – 20 ಡಿ.ಸೆ
ಕಾರವಾರ: 31 ಡಿ.ಸೆ – 24 ಡಿ.ಸೆ
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ