Site icon Vistara News

Karnataka Weather Forecast : ಅಕ್ಟೋಬರ್‌ನಲ್ಲೂ ಕೈಕೊಟ್ಟನಾ ಮಳೆರಾಯ! ಇಲ್ಲೆಲ್ಲ ತಾಪಮಾನ ಏರಿಕೆ

temperature is rising And No Rain alert

ಬೆಂಗಳೂರು: ಹಿಂಗಾರು ಮಳೆಯ ನಿರೀಕ್ಷೆಯಲ್ಲಿರುವ ಜನತೆಗೆ ಅಕ್ಟೋಬರ್‌ 2ನೇ ವಾರವೂ ಭಾರಿ ಮಳೆಯಾಗುವ (Rain News) ಮುನ್ಸೂಚನೆ ಇಲ್ಲ. ನೈರುತ್ಯ ಮುಂಗಾರು ರಾಜ್ಯಾದ್ಯಂತ ದುರ್ಬಲವಾಗಿದೆ. ಕರಾವಳಿಯ ಕೆಲವೇ ಕೆಲವು ಕಡೆ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಬಹಳ ಕಡಿಮೆ ಪ್ರಮಾಣದಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ತಾಪಮಾನ ಏರಿಕೆಯ ಎಚ್ಚರಿಕೆ (Karnataka Weather Forecast) ಇದೆ.

ದಕ್ಷಿಣ ಒಳನಾಡಿನ ತುಮಕೂರು, ಚಿತ್ರದುರ್ಗ ಮತ್ತು ದಾವಣಗೆರೆಯಲ್ಲಿ ಪ್ರತ್ಯೇಕ ಕಡೆ ಭಾರಿ ಮಳೆಯಾಗಬಹುದು. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಚದುರಿದಂತೆ ಅಲ್ಲಲ್ಲಿ ಅತಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಒಣ ಹವೆಯೇ ಮೇಲುಗೈ ಸಾಧಿಸಲಿದೆ.

ಉತ್ತರ ಒಳನಾಡಿನ ಬೆಳಗಾವಿಯಲ್ಲಿ ಅಲ್ಲಲ್ಲಿ ಮಳೆ ಸಾಧಾರಣವಾಗಿರಲಿದೆ. ಹಾವೇರಿ, ಧಾರವಾಡ ಮತ್ತು ಗದಗ, ವಿಜಯನಗರ ಜಿಲ್ಲೆಯಲ್ಲೂ ಅತಿ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಬಿಸಿಲೇ ಹೆಚ್ಚಾಗಿ ಇರಲಿದೆ.

ಮಲೆನಾಡಿನ ಶಿವಮೊಗ್ಗ ಮತ್ತು ಚಿಕ್ಕಮಗಳೂರು, ಕೊಡಗು ಮತ್ತು ಹಾಸನದಲ್ಲಿ ಚದುರಿದಂತೆ ಮಳೆಯಾಗಲಿದೆ. ಕರಾವಳಿಯ ಉತ್ತರ ಕನ್ನಡದಲ್ಲಿ ಜಿಟಿಜಿಟಿ ಮಳೆ ಇರಲಿದೆ. ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಲಘು ಮಳೆಯಾಗಬಹುದು. ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಮುಸುಕಿದ ವಾತಾವರಣವಿರುತ್ತದೆ. ಆದರೆ ಬಿಸಿಲಿನ ಪ್ರಕಾರತೆಯೇ ಜಾಸ್ತಿ ಇರಲಿದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ಹಗುರ ಮಳೆಯಾಗಲಿದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Harassment Case : ಸಾಲದ ಕಂತು ಕಟ್ಟಿಲ್ಲ ಎಂದು ಫೈನಾನ್ಸ್‌ನಲ್ಲೇ ದಿಗ್ಬಂಧನ; ನೊಂದ ಮಹಿಳೆ ಆತ್ಮಹತ್ಯೆ

ಉಷ್ಣಾಂಶದ ಎಚ್ಚರಿಕೆ

ಅ 7-8 ರಂದು ಉಷ್ಣಾಂಶ ಏರಿಕೆ ಆಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಉತ್ತರ ಒಳನಾಡಿನ ಕಲಬುರಗಿ, ಕೊಪ್ಪಳ, ರಾಯಚೂರಲ್ಲಿ ತಾಪಮಾನ ಏರಿಕೆ ಆಗಲಿದೆ. ಜತೆಗೆ ದಕ್ಷಿಣ ಒಳನಾಡಿನ ಮಂಡ್ಯ, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ ಮತ್ತು ಬಳ್ಳಾರಿ ಜಿಲ್ಲೆಗಳು ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿಗಳಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಇತ್ತ ಕರಾವಳಿಯ ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 1-2 ಡಿಗ್ರಿಗಳಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ಇತ್ತ ಕೊಪ್ಪಳ, ಕೋಲಾರ, ಮೈಸೂರು, ತುಮಕೂರು ಮತ್ತು ಉತ್ತರ ಕನ್ನಡ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2-3 ಡಿಗ್ರಿಗಳಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 30 ಡಿ.ಸೆ – 21 ಡಿ.ಸೆ
ಮಂಗಳೂರು: 30 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 31 ಡಿ.ಸೆ – 21 ಡಿ.ಸೆ
ಗದಗ: 31 ಡಿ.ಸೆ – 21 ಡಿ.ಸೆ
ಹೊನ್ನಾವರ: 30 ಡಿ.ಸೆ- 25 ಡಿ.ಸೆ
ಕಲಬುರಗಿ: 34 ಡಿ.ಸೆ – 23 ಡಿ.ಸೆ
ಬೆಳಗಾವಿ: 30 ಡಿ.ಸೆ – 20 ಡಿ.ಸೆ
ಕಾರವಾರ: 31 ಡಿ.ಸೆ – 24 ಡಿ.ಸೆ

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version