ಬೆಂಗಳೂರು: ಇಂದು- ನಾಳೆ (ಡಿ.12-13) ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣದೊಂದಿಗೆ ವ್ಯಾಪಕ ಮಳೆಯಾಗುವ (Rain News) ಸಾಧ್ಯತೆ ಇದೆ. ಇನ್ನು ಉತ್ತರ ಒಳನಾಡಿನ ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದ್ದು, ಉಳಿದೆಡೆ ಒಣಹವೆಯೇ (Karnataka weather Forecast) ಮುಂದುವರಿಯಲಿದೆ.
ದಕ್ಷಿಣ ಒಳನಾಡಿನ ಮೈಸೂರು ಮತ್ತು ಮಂಡ್ಯದಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗಲಿದೆ. ಉಳಿದಂತೆ ಚದುರಿದಂತೆ ಹಗುರ ಮಳೆಯಾಗಬಹುದು. ಉತ್ತರ ಒಳನಾಡಿನ ಬೆಳಗಾವಿ ಮತ್ತು ಹಾವೇರಿಯಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ಸುರಿಯಬಹುದು. ಉಳಿದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಮಲೆನಾಡಿನ ಕೊಡಗು, ಚಿಕ್ಕಮಗಳೂರು, ಹಾಸನ ಹಾಗೂ ಶಿವಮೊಗ್ಗದಲ್ಲೂ ಮಳೆ ಸೂಚನೆ ಇದೆ. ಕರಾವಳಿಯ ದಕ್ಷಿಣ ಕನ್ನಡದಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ ಇದ್ದರೆ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಚದುರಿದಂತೆ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ.
ಇದನ್ನೂ ಓದಿ: Train service: ಇಂದಿನಿಂದ ಬೆಂಗಳೂರು- ನಂದಿಬೆಟ್ಟಕ್ಕೆ ಚುಕುಬುಕು ರೈಲು; ಪ್ರವಾಸಿಗರು ಫುಲ್ ಖುಷ್
ಬೆಂಗಳೂರಿಗಿಲ್ಲ ಮಳೆ ಅಲರ್ಟ್
ರಾಜಧಾನಿ ಬೆಂಗಳೂರಿಗೆ ಮಳೆ ಸೂಚನೆ ಇಲ್ಲ. ಆದರೆ ಕೆಲವೆಡೆ ಮೋಡ ಕವಿದ ವಾತಾವರಣ ಇರಲಿದೆ. ಗರಿಷ್ಠ ಉಷ್ಣಾಂಶ 29 ಹಾಗೂ ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇಲ್ಲೆಲ್ಲ ಒಣಹವೆ
ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಧಾರವಾಡ ಹಾಗೂ ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆ ಸೂಚನೆ ಇಲ್ಲ. ಶುಷ್ಕ ವಾತಾವರಣವೇ ಮುಂದುವರಿಯಲಿದೆ.
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 29 ಡಿ.ಸೆ -20 ಡಿ.ಸೆ
ಮಂಗಳೂರು: 34 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 30 ಡಿ.ಸೆ – 19 ಡಿ.ಸೆ
ಗದಗ: 31 ಡಿ.ಸೆ – 17 ಡಿ.ಸೆ
ಹೊನ್ನಾವರ: 35 ಡಿ.ಸೆ- 22 ಡಿ.ಸೆ
ಕಲಬುರಗಿ: 33 ಡಿ.ಸೆ – 19 ಡಿ.ಸೆ
ಬೆಳಗಾವಿ: 31 ಡಿ.ಸೆ – 16 ಡಿ.ಸೆ
ಕಾರವಾರ: 35 ಡಿ.ಸೆ – 22 ಡಿ.ಸೆ
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ