ಬೆಂಗಳೂರು: ರಾಜ್ಯದ ಕೆಲವು ಕಡೆ ಶುಕ್ರವಾರ ಮತ್ತು ಶನಿವಾರ (ಡಿ. 1 ಮತ್ತು 2) ದಿನ ಭಾರಿ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ತನ್ನ ಮುನ್ಸೂಚನಾ ವರದಿಯಲ್ಲಿ (Karnataka Weather Report) ಉಲ್ಲೇಖಿಸಿದೆ. ಆದರೆ, ಇದೇ ವೇಳೆ ಒಳನಾಡು ಪ್ರದೇಶ ಸಹಿತ ಕರಾವಳಿ ಭಾಗಗಳಲ್ಲಿ ಉಷ್ಣಾಂಶದಲ್ಲಿಯೂ ಹೆಚ್ಚಳವಾಗುವ ಬಗ್ಗೆ ಅಂದಾಜಿಸಲಾಗಿದೆ. ಅಂದರೆ, ಸಾಮಾನ್ಯ ತಾಪಮಾನಕ್ಕಿಂತ ಹೆಚ್ಚಳವಾಗಲಿದ್ದು, 3.1 ಡಿಗ್ರಿ ಸೆಲ್ಸಿಯಸ್‌ನಿಂದ 5 ಡಿಗ್ರಿ ಸೆಲ್ಸಿಯಸ್ ವರೆಗೆ ಉತ್ತರ ಒಳನಾಡು (North Inland), ದಕ್ಷಿಣ ಒಳನಾಡು (South Inland) ಹಾಗೂ ಕರಾವಳಿಯ (coastal regions) ಕೆಲವು ಕಡೆಗಳಲ್ಲಿ ಏರಿಕೆ ಕಾಣಲಿದೆ. ಹೀಗಾಗಿ ಬೆಳಗ್ಗೆ ವೇಳೆಗೆ ಬಿಸಿಲಿನ ತಾಪವೂ ತಟ್ಟಲಿದೆ. ಅದೇ ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗಲಿದೆ (Rain News) ಎಂದು ಅಂದಾಜಿಸಲಾಗಿದೆ. ಕರಾವಳಿಯಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಇನ್ನು ರಾತ್ರಿ ವೇಳೆ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಚಳಿಯ ವಾತಾವರಣವೂ ಇರಲಿದೆ ಎಂದು ಹೇಳಲಾಗಿದೆ. ಅಂದರೆ, ಅಲ್ಲಿ ತಾಪಮಾನದಲ್ಲಿ ಸಾಮಾನ್ಯಕ್ಕಿಂತ -1.5 ಡಿಗ್ರಿ ಸೆಲ್ಸಿಯಸ್‌ನಿಂದ 1.5 ಡಿಗ್ರಿ ಸೆಲ್ಸಿಯಸ್ ವರೆಗೆ ಇಳಿಕೆ ಕಾಣಲಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಉತ್ತರ ಒಳನಾಡಿನ ಎಲ್ಲೆಲ್ಲಿ ಮಳೆ?
ಉತ್ತರ ಒಳನಾಡಿನ ವಿಜಯಪುರ, ಬಾಗಲಕೋಟೆ, ಗದಗ, ವಿಜಯನಗರದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಉಳಿದೆಡೆ ಸಾಮಾನ್ಯವಾಗಿರಲಿದೆ ಎಂದು ಅಂದಾಜಿಸಲಾಗಿದೆ.
ಮೈಸೂರು, ದಾವಣಗೆರೆಯಲ್ಲಿ ಮಳೆ ತೀವ್ರ
ದಕ್ಷಿಣ ಒಳನಾಡಿನ ಮೈಸೂರು ಮತ್ತು ದಾವಣಗೆರೆಯಲ್ಲಿ ವ್ಯಾಪಕ ಮಳೆಯಾಗಲಿದ್ದರೆ, ಉಳಿದ ಕಡೆ ಸಾಧಾರಣದಿಂದ ಮಧ್ಯಮ ಪ್ರಮಾಣದಲ್ಲಿ ಮಳೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ.
ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಅಬ್ಬರ?
ಮಲೆನಾಡಿನ ಹಾಸನ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ. ಕೊಡಗು ಜಿಲ್ಲೆಯ ಬಹುತೇಕ ಕಡೆ ಅಲ್ಪ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಚದುರಿದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.
ಬೆಂಗಳೂರಲ್ಲಿ ಬೆಳಗಿನ ಜಾವ ಮಂಜಿನ ಹವಾ!
ಬೆಂಗಳೂರಿನಲ್ಲಿ ಬೆಳಗಿನ ಜಾವ ಮಂಜು ಮುಸುಕಿದ ವಾತಾವರಣ ಹೆಚ್ಚಾಗಿ ಕಂಡು ಬರಲಿದೆ. ಮಧ್ಯಾಹ್ನದ ನಂತರ ಅಲ್ಲಲ್ಲಿ ಕೆಲವೊಮ್ಮೆ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿ ವೇಳೆ ಜಿಟಿ ಜಿಟಿ ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ. ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ಇದ್ದರೆ, ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇದನ್ನೂ ಓದಿ: Laksha Deepotsava : ಡಿ. 8ರಿಂದ ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ; ಈ ಜಿಲ್ಲೆಗಳಿಂದ KSRTC ವಿಶೇಷ ಬಸ್
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 28 ಡಿ.ಸೆ -19 ಡಿ.ಸೆ
ಮಂಗಳೂರು: 34 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 33 ಡಿ.ಸೆ – 19 ಡಿ.ಸೆ
ಗದಗ: 33 ಡಿ.ಸೆ – 21 ಡಿ.ಸೆ
ಹೊನ್ನಾವರ: 34 ಡಿ.ಸೆ- 22 ಡಿ.ಸೆ
ಕಲಬುರಗಿ: 32 ಡಿ.ಸೆ – 22 ಡಿ.ಸೆ
ಬೆಳಗಾವಿ: 31 ಡಿ.ಸೆ – 19 ಡಿ.ಸೆ
ಕಾರವಾರ: 35 ಡಿ.ಸೆ – 22 ಡಿ.ಸೆ