Site icon Vistara News

Karnataka Weather : ನಾಳೆ ಬೆಂಗಳೂರಲ್ಲಿ ಜೋರು ಮಳೆ; ಕರಾವಳಿಗೂ ಅಲರ್ಟ್‌

baby running in rain drops

ಬೆಂಗಳೂರು: ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ (Rain News) ಮಳೆಯಾದರೆ, ಒಳನಾಡಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ (Karnataka weather forecast) ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಚದುರಿದ ಮಳೆ ಸುರಿಯಲಿದೆ. ಉಳಿದಂತೆ ತುಮಕೂರು, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಾವಣಗೆರೆಯಲ್ಲಿ ಒಣ ಹವೆ ಮೇಲುಗೈ ಸಾಧಿಸಲಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗದಗ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಲಘು ಮಳೆ ಬೀಳಲಿದೆ. ಉಳಿದ ಭಾಗಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆಯಿದೆ.

ಮಲೆನಾಡಿನ ಹಾಸನ ಮತ್ತು ಕೊಡಗು, ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ಸುರಿಯಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version