ಬೆಂಗಳೂರು: ಮಲೆನಾಡು ಮತ್ತು ಕರಾವಳಿಯಲ್ಲಿ ಭಾರೀ ಮಳೆ (Heavy Rain ) ಸಾಧ್ಯತೆ ಇದ್ದರೆ, ಒಳನಾಡಲ್ಲಿ ಚದುರಿದಂತೆ ಹಗುರದಿಂದ ಮಳೆಯಾಗುವ (Rain News) ಸಾಧ್ಯತೆಯಿದೆ. ಮುಂದಿನ 24 ಗಂಟೆಯಲ್ಲಿ ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಮಳೆಯಾಗುವ (Karnataka weather Forecast) ಸಾಧ್ಯತೆ ಇದೆ.
ಉತ್ತರ ಒಳನಾಡಿನ ಧಾರವಾಡ, ಹಾವೇರಿ, ವಿಜಯನಗರ ಮತ್ತು ಬಾಗಲಕೋಟೆಯಲ್ಲಿ ಮಧ್ಯಮ ಮಳೆಯಾಗಲಿದೆ. ಉಳಿದ ಭಾಗಗಳಲ್ಲಿ ಶುಷ್ಕ ವಾತಾವರಣ ಮೇಲುಗೈ ಸಾಧಿಸಲಿದೆ. ಮಲೆನಾಡಿನ ಹಾಸನ, ಕೊಡಗು, ಚಿಕ್ಕಮಗಳೂರಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದೆ.
ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾದರೆ, ಉತ್ತರ ಕನ್ನಡ ಮತ್ತು ಉಡುಪಿಯಲ್ಲೂ ಮಳೆ ಮುಂದುವರಿಯಲಿದೆ. ಬೆಂಗಳೂರು ವ್ಯಾಪ್ತಿಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 29 ಡಿ.ಸೆ -18 ಡಿ.ಸೆ
ಮಂಗಳೂರು: 32 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 29 ಡಿ.ಸೆ – 15 ಡಿ.ಸೆ
ಗದಗ: 31 ಡಿ.ಸೆ – 18 ಡಿ.ಸೆ
ಹೊನ್ನಾವರ: 35 ಡಿ.ಸೆ- 23 ಡಿ.ಸೆ
ಕಲಬುರಗಿ: 32 ಡಿ.ಸೆ – 18 ಡಿ.ಸೆ
ಬೆಳಗಾವಿ: 30 ಡಿ.ಸೆ – 18 ಡಿ.ಸೆ
ಕಾರವಾರ: 34 ಡಿ.ಸೆ – 23 ಡಿ.ಸೆ
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ