ಬೆಂಗಳೂರು: ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ (Rain News) ಸಾಧ್ಯತೆಯಿದೆ. ಇತ್ತ ಕರಾವಳಿಯಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗುಡುಗು, ಮಿಂಚು ಸಹಿತ ಮಳೆಯಾಗುವ (Karnataka Weather Forecast) ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಮೈಸೂರು ಮತ್ತು ದಾವಣಗೆರೆಯಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಮಧ್ಯಮ ಮಳೆಯ ನಿರೀಕ್ಷೆ ಇದೆ. ರಾಜಧಾನಿ ಬೆಂಗಳೂರಲ್ಲಿ ಸಾಮಾನ್ಯವಾಗಿ ಕೆಲವೊಮ್ಮೆ ಮೋಡ ಕವಿದ ವಾತಾವರಣ ಇದ್ದರೆ ಸಂಜೆ ಅಥವಾ ರಾತ್ರಿಯಂದು ಜಿಟಿ ಜಿಟಿ ಮಳೆಯಾಗಲಿದೆ.
ಉತ್ತರ ಒಳನಾಡಿನ ವಿಜಯಪುರ, ಬಾಗಲಕೋಟೆ, ಗದಗ, ವಿಜಯನಗರದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಉಳಿದೆಡೆ ಹಗುರದಿಂದ ಕೂಡಿರಲಿದೆ.
ಮಲೆನಾಡಿನ ಹಾಸನ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಭಾರೀ ಮಳೆಯಾದರೆ ಕೊಡಗು ಜಿಲ್ಲೆಯಾದ್ಯಂತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಚದುರಿದ ಮಳೆಯಾಗಲಿದೆ.
ಇದನ್ನೂ ಓದಿ: Mumbai Airport: ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ; ಈತನ ಬೇಡಿಕೆಯೋ… ಅಬ್ಬಾ!
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 28 ಡಿ.ಸೆ -19 ಡಿ.ಸೆ
ಮಂಗಳೂರು: 35 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 32 ಡಿ.ಸೆ – 19 ಡಿ.ಸೆ
ಗದಗ: 32 ಡಿ.ಸೆ – 20 ಡಿ.ಸೆ
ಹೊನ್ನಾವರ: 34 ಡಿ.ಸೆ- 24 ಡಿ.ಸೆ
ಕಲಬುರಗಿ: 33 ಡಿ.ಸೆ – 22 ಡಿ.ಸೆ
ಬೆಳಗಾವಿ: 31 ಡಿ.ಸೆ – 18 ಡಿ.ಸೆ
ಕಾರವಾರ: 35 ಡಿ.ಸೆ – 24 ಡಿ.ಸೆ
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.