Site icon Vistara News

Karnataka Weather : ಮಲೆನಾಡಲ್ಲಿ ಬಿಟ್ಟು ಬಿಡದೆ ಸುರಿಯುವ ಚಿಟಪಟ ಮಳೆ

vijayapur rain

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ಮಲೆನಾಡು ಮತ್ತು ಉತ್ತರ ಒಳನಾಡಿನ ಪ್ರತ್ಯೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯಾದ್ಯಂತ ಆಯ್ದ ಸ್ಥಳದಲ್ಲಿ ಮಿಂಚು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ (Karnataka Weather Forecast) ಇದೆ.

ದಕ್ಷಿಣದಲ್ಲಿ ಹಗುರ ಮಳೆಯಷ್ಟೇ

ದಕ್ಷಿಣ ಒಳನಾಡಲ್ಲಿ ಮಳೆ ಅಬ್ಬರ ಕಡಿಮೆ ಆಗಿದ್ದು, ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಕೆಲವೆಡೆ ಮೋಡ ಕವಿದ ವಾತಾವರಣ ಇರಲಿದೆ. ಬೆಂಗಳೂರಲ್ಲಿ ಸಂಜೆ ಅಥವಾ ರಾತ್ರಿ ವೇಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಹಾಗೂ ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಉತ್ತರ ಒಳನಾಡಲ್ಲಿ ಅಬ್ಬರಿಸುವ ಮಳೆ

ಉತ್ತರ ಒಳನಾಡಿನ ಧಾರವಾಡ, ಹಾವೇರಿ, ಗದಗ ಹಾಗೂ ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರದ ಹಲವೆಡೆ ಭಾರೀ ಮಳೆಯಾಗುವ ಸಂಭವವಿದೆ. ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದಂತೆ ಚದುರಿದಂತೆ ಲಘು ಮಳೆಯಾಗಬಹುದು.

ಮಲೆನಾಡಿನ ಹಾಸನ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸುರಿಯಲಿದೆ. ಕರಾವಳಿಯ ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಸಾಧಾರಣವಾಗಿರಲಿದೆ.

ಇದನ್ನೂ ಓದಿ: Woman Ends life : ಹೊಟ್ಟೆನೋವು ತಾಳಲಾರದೆ ಕಪಿಲಾ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಐಎಂಡಿ ಯೆಲ್ಲೋ ಅಲರ್ಟ್‌ ನೀಡಿದೆ.

ತಾಪಮಾನ ಏರಿಕೆ

ರಾಜ್ಯಾದ್ಯಂತ ಹಲವು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗುವ ಸಾಧ್ಯತೆ ಇದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 28 ಡಿ.ಸೆ -20 ಡಿ.ಸೆ
ಮಂಗಳೂರು: 29 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 28 ಡಿ.ಸೆ – 20 ಡಿ.ಸೆ
ಗದಗ: 29 ಡಿ.ಸೆ – 20 ಡಿ.ಸೆ
ಹೊನ್ನಾವರ: 34 ಡಿ.ಸೆ- 24 ಡಿ.ಸೆ
ಕಲಬುರಗಿ: 33 ಡಿ.ಸೆ – 23 ಡಿ.ಸೆ
ಬೆಳಗಾವಿ: 30 ಡಿ.ಸೆ – 20 ಡಿ.ಸೆ
ಕಾರವಾರ: 34 ಡಿ.ಸೆ – 24 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version