Site icon Vistara News

Karnataka Weather: ಗುರುವಾರ, ಶುಕ್ರವಾರ ಭಾರಿ ಮಳೆ; ಬೆಂಗಳೂರಲ್ಲಿ ಸ್ವಲ್ಪ ಮಳೆ, ಅಲ್ಪ ಚಳಿ!

Rain and girl with umbrella

ಬೆಂಗಳೂರು: ರಾಜ್ಯದಲ್ಲಿ ಬಹುತೇಕ ಕ್ಷೀಣ ಎಂದು ಹೇಳಲಾಗಿದ್ದ ಮಳೆ ಈಗ ಅಲ್ಪಮಟ್ಟಿನ ಭರವಸೆಯನ್ನು ಮೂಡಿಸಿದೆ. ಬುಧವಾರ (ನ.22) ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಇತರ ಕಡೆ (Bengaluru Rains) ಭರ್ಜರಿ ಮಳೆಯಾದ ವರದಿಯಾಗಿದೆ. ನ. 24 – 25ರಂದು ಭಾರಿ ಮಳೆಯಾಗುವ (Karnataka Weather) ಎಚ್ಚರಿಕೆಯನ್ನು ಹವಾಮಾನ ಇಲಾಖೆ ತನ್ನ ಮುನ್ಸೂಚನಾ ವರದಿಯಲ್ಲಿ ನೀಡಿದೆ. ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ, ಕರಾವಳಿಯ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಉತ್ತರ ಒಳನಾಡಿನಲ್ಲೂ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ (Rain News) ಸಾಧ್ಯತೆಯಿದೆ.

ಕರಾವಳಿ ದಕ್ಷಿಣ ಒಳನಾಡಿನಲ್ಲಿ ಮಳೆ ಮುನ್ನೆಚ್ಚರಿಕೆ

ಮುಂದಿನ 24 ಗಂಟೆಯಲ್ಲಿ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದೆ. ಮುಂದಿನ 48 ಗಂಟೆಯಲ್ಲಿ ಚಿಕ್ಕಮಗಳೂರು ಮತ್ತು ಕೊಡಗಿನಲ್ಲಿ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಚಾಮರಾಜನಗರ, ಮಂಡ್ಯ, ಮೈಸೂರು, ಕೋಲಾರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ರಾಮನಗರ, ಚಿಕ್ಕಬಳ್ಳಾಪುರ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನಲ್ಲಿ ಮಳೆ ಪ್ರಮಾಣ ಕುಸಿತ

ಉತ್ತರ ಒಳನಾಡಿನ ಹಾವೇರಿಯಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ಸಾಧ್ಯತೆ ಇದೆ. ಉಳಿದಂತೆ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನಾ ವರದಿಯಲ್ಲಿ ತಿಳಿಸಿದೆ.

Rain and girl with umbrella

ಮಳೆನಾಡಿನಲ್ಲೂ ವ್ಯಾಪಕ ಮಳೆ; ಶಿವಮೊಗ್ಗದಲ್ಲಿ ಸಾಧಾರಣ

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರಲ್ಲಿ ವ್ಯಾಪಕ ಮಳೆಯಾಗಲಿದ್ದು, ಶಿವಮೊಗ್ಗದಲ್ಲಿ ಸಾಧಾರಣ ಮಳೆಯಾಗಬಹುದು. ಕರಾವಳಿಯ ದಕ್ಷಿಣ ಕನ್ನಡ ಭರ್ಜರಿ ಮಳೆಯಾದರೆ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಅಲ್ಪ ಪ್ರಮಾಣದ ಮಳೆಯಾಗಲಿದೆ.

ಇದನ್ನೂ ಓದಿ: Zameer Ahmed Khan : ಹೈದರಾಬಾದ್‌ನಲ್ಲಿ ಜಮೀರ್‌ ಖಾನ್‌ ತಂಗಿದ್ದ ಹೋಟೆಲ್‌ಗೆ ದಾಳಿ

ಬೆಂಗಳೂರಿನಲ್ಲೂ ಅಲ್ಪ ಮಳೆ

ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದರೂ ಬೆಳಗ್ಗೆ ವೇಳೆ ಅಲ್ಪ ಪ್ರಮಾಣದಲ್ಲಿ ಬಿಸಿಲು ಇರುತ್ತದೆ. ಸಂಜೆ ಇಲ್ಲವೇ ರಾತ್ರಿ ವೇಳೆಗೆ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗಬಹುದು. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕಲಿದ್ದು, ಚಳಿಯ ವಾತಾವರಣ ನಿರ್ಮಾಣವಾಗಲಿದೆ. ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್‌ ಇದ್ದು, ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್‌ ಇಳಿಕೆ ಕಾಣಲಿದೆ. ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇನ್ನು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿರುವ ವರದಿ ಆಗಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು. ವಿಜಯಪುರದಲ್ಲಿ ಕಡಿಮೆ ಉಷ್ಣಾಂಶ 15.6 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Exit mobile version