Site icon Vistara News

Karnataka Weather : ನವೆಂಬರ್‌ ಮೊದಲ ವಾರ ಗುಡುಗು ಸಹಿತ ಭಾರಿ ಮಳೆ ಸೂಚನೆ!

Girls enjoying rain in road

ಬೆಂಗಳೂರು: ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಮಳೆ ಮುನ್ಸೂಚನೆ (Karnataka weather forecast) ಇದ್ದರೆ ಉತ್ತರ ಒಳನಾಡಲ್ಲಿ ಒಣಹವೆ ಇರಲಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗುವ (Rain News) ಸಾಧ್ಯತೆ ಇದೆ. ಕರಾವಳಿಯ ಕೆಲವು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗುವ ಸಾಧ್ಯತೆ ಇದೆ.

ರಾಜ್ಯಾದ್ಯಂತ ಒಂದೆರಡು ಕಡಗಳಲ್ಲಿ ಗುಡುಗು, ಮಿಂಚಿನಿಂದ ಕೂಡಿದ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ದಾವಣಗೆರೆ, ಮೈಸೂರು, ಮಂಡ್ಯದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಚಾಮರಾಜನಗರ, ತುಮಕೂರು, ರಾಮನಗರದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಇತ್ತ ಉತ್ತರ ಒಳನಾಡಿನ ಗದಗ, ಧಾರವಾಡ, ಹಾವೇರಿಯಲ್ಲಿ ಗುಡುಗಿನಿಂದ ಕೂಡಿದ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ವಿಜಯನಗರ, ಬೆಳಗಾವಿ, ಬಾಗಲಕೋಟೆ ಮತ್ತು ರಾಯಚೂರಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ಹವಾಮಾನವು ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ಮಲೆನಾಡಿನ ಹಾಸನ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಸೇರಿದಂತೆ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭರ್ಜರಿ ಮಳೆಯಾಗಲಿದೆ.

ಬೆಂಗಳೂರಲ್ಲಿ ಗಾಳಿ-ಮಳೆ

ರಾಜಧಾನಿ ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿಯಂದು ಒಂದೆರಡು ಬಾರಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆ ಇದೆ.

ಅ.30ರಂದು ಕರಾವಳಿ ಹಾಗೂ ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಮಾಣಿ , ತ್ಯಾಗರ್ತಿಯಲ್ಲಿ ತಲಾ 5 ಸೆಂ.ಮೀ, ಪಣಂಬೂರು, ಧರ್ಮಸ್ಥಳ, ಬೆಳ್ತಂಗಡಿ , ಸಕಲೇಶಪುರದಲ್ಲಿ ತಲಾ 4 ಸೆಂ.ಮೀ ಮಳೆಯಾಗಿದೆ. ಬೆಳಗಾವಿ ನಗರ 3, ಸುಳ್ಯ, ಪುತ್ತೂರು, ಮಂಗಳೂರು, ಹೊಸದುರ್ಗ, ಎನ್.ಆರ್.ಪುರ, ಶೃಂಗೇರಿ, ಯಗಟಿ , ಭಾಗಮಂಡಲದಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ.

ಬನವಾಸಿ, ಕುಮಟಾ, ಮಂಗಳೂರು ವಿಮಾನ ನಿಲ್ದಾಣ, ಕುಂದಾಪುರ, ಅಕ್ಕಿಆಲೂರು, ಕಟ್ರೋಲ್, ಬೈಲಹೊಂಗಲ, ಚಿಕ್ಕಮಗಳೂರು, ಕೊಟ್ಟಿಗೆಹಾರ ಕಡೂರು, ಜಯಪುರ, ತರೀಕೆರೆ, ಕೊಪ್ಪ, ಕಳಸ, ಅಜ್ಜಂಪುರ, ಮಾಗಡಿ, ಕೊಳ್ಳೇಗಾಲದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ಕಾರವಾರದಲ್ಲಿ ಗರಿಷ್ಠ ಉಷ್ಣಾಂಶ 34 ಡಿ.ಸೆ ಹಾಗೂ ಕನಿಷ್ಠ ಉಷ್ಣಾಂಶ ಬೀದರ್‌ನಲ್ಲಿ 16.2 ಡಿ.ಸೆ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version