ಬೆಂಗಳೂರು: ಮೇ 23ರಂದು ಗುರುವಾರ ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಹುತೇಕ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ (Karnataka Weather) ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ಜಿಲ್ಲೆಗಳಲ್ಲಿ ಕೂಡ ಗುರುವಾರ ಹಲವೆಡೆ ಗುಡುಗು ಸಹಿತ ಗಾಳಿ (40-50 ಕಿ.ಮೀ) ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಹಾಗೆಯೇ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ವಿಜಯಪುರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 ಕಿ.ಮೀ) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹಲವೆಡೆ ಗುಡುಗು ಸಹಿತ ಗಾಳಿಯೊಂದಿಗೆ (40-45 ಕಿ.ಮೀ) ಹಗುರ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-45 ಕಿ.ಮೀ) ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದೆ.
ಇದನ್ನೂ ಓದಿ | Rain News: ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ; ಹಾರಿದ 10ಕ್ಕೂ ಹೆಚ್ಚು ಮನೆಗಳ ಮೇಲಿನ ಶೀಟ್, ಇಬ್ಬರಿಗೆ ಗಾಯ
ಇದೇ ರೀತಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ, ಅಂದರೆ ಮೇ 29ರವರೆಗೆ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಮೇ 23ರಂದು ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಒಂದೆರಡು ಸ್ಥಳಗಳಲ್ಲಿ ಗುಡುಗು, ಬಿರುಗಾಳಿ ಸಹಿತ (40-50 ಕಿ.ಮೀ) ಭಾರಿ ಮಳೆ ಸಂಭವಿಸುವ ಸಾಧ್ಯತೆಯಿದೆ. ಇನ್ನು ದಕ್ಷಿಣ ಕನ್ನಡ ಜಿಲ್ಲೆಯ ಒಂದೆರೆಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಅದೇ ರೀತಿ ಮೇ 24ರಂದು ಕೊಡಗು, ಮಂಡ್ಯ, ಹಾಸನ, ಚಾಮರಾಜನಗರ, ಚಿಕ್ಕಮಗಳೂರು ಜಿಲ್ಲೆಗಳ ಒಂದೆರೆಡು ಸ್ಥಳಗಳಲ್ಲಿ ಭಾರೀ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಂದೆರೆಡು ಸ್ಥಳಗಳಲ್ಲಿ ಭಾರೀ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ತಾಪಮಾನದ ಮುನ್ಸೂಚನೆ
ಮೇ 23 ರಿಂದ ಉತ್ತರ ಒಳನಾಡಿನಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಲಿಯನ್ ಹೆಚ್ಚಾಗುವ ಸಾಧ್ಯತೆ ಇದೆ.
ಮೀನುಗಾರರಿಗೆ ಎಚ್ಚರಿಕೆ
ಕರಾವಳಿಯಲ್ಲಿ 55 ಕಿ.ಮೀ. ವೇಗದಲ್ಲಿ ಗಂಟೆಗೆ 40 ಕಿ.ಮೀ. ನಿಂದ 45 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.
ಇದನ್ನು ಓದಿ | Hampi Monument: ಹಂಪಿಯಲ್ಲಿ ಭಾರಿ ಮಳೆಗೆ ಕುಸಿದು ಬಿದ್ದ ವಿಜಯನಗರ ಅರಸರ ಕಾಲದ ಕಲ್ಲು ಮಂಟಪ
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ
ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ಮತ್ತು ಸುತ್ತಲಿನ ಪ್ರದೇಶದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರದಿಂದ ಸಾಧಾರಣ ಮಳೆಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 32°C ಮತ್ತು 23°C ಇರುವ ಸಾಧ್ಯತೆ ಇದೆ.