Site icon Vistara News

Karnataka weather : ಮಳೆ ಬರುತ್ತೆ, ಛತ್ರಿ ಬೇಕಾಗುತ್ತೆ; ಚಳಿ ಹೇಗಿರುತ್ತೆ?

Heavy rain very likely to occur at isolated places over Dakshina Kannada district of Coastal Karnataka

ಬೆಂಗಳೂರು: ಡಿ.5ರಂದು ಕರಾವಳಿಯ ಹಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಭಾರಿ ಮಳೆಯಾಗುವ (Karnataka weather Forecast) ಸಾಧ್ಯತೆ ಇದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ (Rain News) ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಉಳಿದ ಭಾಗಗಳಲ್ಲಿ ವ್ಯಾಪಕವಾಗಿ ಹಗುರದಿಂದ ಮಳೆಯಾಗಬಹುದು. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಹಾವೇರಿಯಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಪ್ರದೇಶದಲ್ಲಿ ಒಣ ಹವೆ ಮೇಲುಗೈ ಸಾಧಿಸಲಿದೆ.

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಭರ್ಜರಿ ಮಳೆಯಾಗಲಿದೆ. ಕರಾವಳಿಯ ಉತ್ತರ ಕನ್ನಡ ಜಿಲ್ಲೆಯಲ್ಲಿ ಚದುರಿದಂತೆ ಸಾಧಾರಣ ಮಳೆ ಸುರಿಯಲಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿಯ ಅಲ್ಲಲ್ಲಿ ವ್ಯಾಪಕ ಮಳೆಯಾಗಲಿದೆ.

ಭಾರಿ ಮಳೆ ಎಚ್ಚರಿಕೆ

ಮುಂದಿನ 48 ಗಂಟೆಯಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಲ್ಲಿ ಗುಡುಗು ಮಿಂಚಿನ ಮಳೆ ಇರಲಿದೆ. ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿಯ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ ಮತ್ತು ಮೈಸೂರು, ಮಂಡ್ಯದಲ್ಲಿ ವ್ಯಾಪಕವಾಗಿ ಮಳೆ ಸುರಿಯಲಿದೆ.

ಬೆಂಗಳೂರಲ್ಲಿ ಹಗುರ ಮಳೆ

ರಾಜಧಾನಿ ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಕಡೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ. ಕೆಲವೆಡೆ ಮಂಜು ಮುಸುಕುವ ಸಾಧ್ಯತೆ ಇದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 26 ಡಿ.ಸೆ -18 ಡಿ.ಸೆ
ಮಂಗಳೂರು: 32 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 29 ಡಿ.ಸೆ – 15 ಡಿ.ಸೆ
ಗದಗ: 32 ಡಿ.ಸೆ – 18 ಡಿ.ಸೆ
ಹೊನ್ನಾವರ: 35 ಡಿ.ಸೆ- 23 ಡಿ.ಸೆ
ಕಲಬುರಗಿ: 32 ಡಿ.ಸೆ – 18 ಡಿ.ಸೆ
ಬೆಳಗಾವಿ: 31 ಡಿ.ಸೆ – 15 ಡಿ.ಸೆ
ಕಾರವಾರ: 36 ಡಿ.ಸೆ – 22 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version