ಬೆಂಗಳೂರು: ರಾಜ್ಯಾದ್ಯಂತ ಮಳೆ ಅಬ್ಬರ ಕಡಿಮೆ (Karnataka Weather Forecast) ಆಗಿದೆ. ಆಗೊಮ್ಮೆ ಈಗೊಮ್ಮೆ ಮಳೆಯ ದರ್ಶನವಾಗುತ್ತಿದೆ. ಸದ್ಯ ರಾಜ್ಯದಲ್ಲಿ ನಾಳೆ, ನಾಳಿಂದು ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ (rain News) ನಿರೀಕ್ಷೆ ಇದೆ.
ಮಲೆನಾಡಲ್ಲಿ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯ ಸೂಚನೆ ಇದ್ದರೆ, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ಮಲೆನಾಡಲ್ಲಿ ಅಬ್ಬರಿಸುವ ವರುಣ
ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯೆತೆಯೂ ಇದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಸಾಧಾರಣದಿಂದ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಮುಸುಕಿದ ವಾತಾವರಣವಿರುತ್ತದೆ. ಕೆಲವು ಗುಡುಗು, ಮಿಂಚಿನ ಮಳೆಯಾಗುವ ಬಹಳ ಸಾಧ್ಯತೆಗಳಿವೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇದನ್ನೂ ಓದಿ: Self Harming : 5 ವರ್ಷದ ಮಗಳೊಂದಿಗೆ ಸೂಳೆಕೆರೆಗೆ ಹಾರಿ ತಾಯಿ ಆತ್ಮಹತ್ಯೆ, ಎಷ್ಟು ನೊಂದಿದ್ದಳೋ?
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 30 ಡಿ.ಸೆ – 21 ಡಿ.ಸೆ
ಮಂಗಳೂರು: 30 ಡಿ.ಸೆ – 23ಡಿ.ಸೆ
ಚಿತ್ರದುರ್ಗ: 32 ಡಿ.ಸೆ – 20 ಡಿ.ಸೆ
ಗದಗ: 32 ಡಿ.ಸೆ – 21 ಡಿ.ಸೆ
ಹೊನ್ನಾವರ: 31 ಡಿ.ಸೆ- 24 ಡಿ.ಸೆ
ಕಲಬುರಗಿ: 34 ಡಿ.ಸೆ – 23 ಡಿ.ಸೆ
ಬೆಳಗಾವಿ: 30 ಡಿ.ಸೆ – 20 ಡಿ.ಸೆ
ಕಾರವಾರ: 35 ಡಿ.ಸೆ – 24 ಡಿ.ಸೆ
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ