ಬೆಂಗಳೂರು: ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ (Karnataka weather Forecast) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Rain News ) ಮುನ್ಸೂಚನೆಯನ್ನು ನೀಡಿದೆ. ದಕ್ಷಿಣ ಒಳನಾಡು, ಮಲೆನಾಡಿನಲ್ಲಿ ಭಾರೀ ಮಳೆ ಸಾಧ್ಯತೆ ಇದ್ದರೆ, ಕರಾವಳಿ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಮುಖ್ಯವಾಗಿ ಉತ್ತರ ಒಳನಾಡಿನಲ್ಲಿ ಶುಷ್ಕ ಹವಾಮಾನ ಮೇಲುಗೈ (Dry Weather) ಸಾಧಿಸಲಿದೆ.
ದಕ್ಷಿಣ ಒಳನಾಡಿನ ಮೈಸೂರು ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆ ಸೂಚನೆ ಇಲ್ಲ ಬದಲಿಗೆ ಒಣ ಹವೆಯೇ ಇರಲಿದೆ.
ಇದನ್ನೂ ಓದಿ: Murder Case : ಗಂಡನ ಜತೆ ಸೇರಿ ಹೆತ್ತ ತಾಯಿಯನ್ನೇ ಕೊಂದಳಾ ಮಗಳು!
ಮಲೆನಾಡಿನ ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಹಗುರದಿಂದ ಕೂಡಿದ ಮಳೆ ಸುರಿಯಲಿದೆ. ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಸಾಧಾರಣ ಮಳೆಯಾದರೆ, ಉತ್ತರ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯ ನಿರೀಕ್ಷೆ ಇದೆ.
ಬೆಂಗಳೂರಲ್ಲಿ ಚದುರಿದ ಮಳೆ
ಬೆಂಗಳೂರು ವ್ಯಾಪ್ತಿಯಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇದನ್ನೂ ಓದಿ: Murder Case : ವರದಕ್ಷಿಣಿಗಾಗಿ ಹೆಂಡತಿನಾ ಹೆಲ್ಮೆಟ್‌ನಿಂದ ಹೊಡೆದು ಕೊಂದ ದುಷ್ಟ ಪತಿ
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 27 ಡಿ.ಸೆ -18 ಡಿ.ಸೆ
ಮಂಗಳೂರು: 32 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 29 ಡಿ.ಸೆ – 15 ಡಿ.ಸೆ
ಗದಗ: 31 ಡಿ.ಸೆ – 16 ಡಿ.ಸೆ
ಹೊನ್ನಾವರ: 34 ಡಿ.ಸೆ- 22 ಡಿ.ಸೆ
ಕಲಬುರಗಿ: 32 ಡಿ.ಸೆ – 18 ಡಿ.ಸೆ
ಬೆಳಗಾವಿ: 29 ಡಿ.ಸೆ – 17 ಡಿ.ಸೆ
ಕಾರವಾರ: 33 ಡಿ.ಸೆ – 23 ಡಿ.ಸೆ
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ.