ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ರಾಜ್ಯದ ಒಂದೆರಡು ಕಡೆಗಳಲ್ಲಿ ಮಳೆಯಾಗುವ (Rain News) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಹಾಗೂ ಮಲೆನಾಡಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿನ ಮಂಡ್ಯ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಮೈಸೂರು ಮತ್ತು ತುಮಕೂರಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಲಿದೆ.
ಉತ್ತರ ಒಳನಾಡಿನ ಕಲಬುರಗಿ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಉಳಿದಂತೆ ಹಗುರದಿಂದ ಕೂಡಿದ ಮಳೆಯಾಗಲಿದೆ. ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಇತ್ತ ಕರಾವಳಿಯ ದಕ್ಷಿಣ ಕನ್ನಡದಲ್ಲಿ ಚದುರಿದಂತೆ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರವಾದ ಮಳೆಯಾಗಲಿದೆ.
ಇದನ್ನೂ ಓದಿ: Viral News: ಪತ್ನಿಯ ಬರ್ತ್‌ಡೇ, ಪತಿಗೆ ಡೆತ್‌ಡೇ: ದುಬೈಗೆ ಕರೆದೊಯ್ಯದ್ದಕ್ಕೆ ಮೂಗಿಗೆ ಗುದ್ದಿ ಗಂಡನ ಪ್ರಾಣ ತೆಗೆದ ಹೆಂಡತಿ
ಆಗೊಮ್ಮೆ ಈಗೊಮ್ಮೆ ದರ್ಶನ ಕೊಡುವ ಸೂರ್ಯ
ನ.29ರಂದು ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವೊಮ್ಮೆ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಗಳಿವೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕಲಿದೆ. ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಚಾಮರಾಜನಗರದಲ್ಲಿ ಕನಿಷ್ಠ ಉಷ್ಣಾಂಶ ದಾಖಲು
ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಸೋಮವಾರ ಮಳೆಯಾಗಿದ್ದು, ಕರಾವಳಿಯಲ್ಲಿ ಒಣ ಹವೆ ಇತ್ತು. ಕಡಿಮೆ ಉಷ್ಣಾಂಶ 17.3 ಡಿ.ಸೆ. ಚಾಮರಾಜನಗರದಲ್ಲಿ ದಾಖಲಾಗಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.