ಬೆಂಗಳೂರು: ಕರ್ನಾಟಕದ ಒಳನಾಡಿನ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಅಥವಾ ಗುಡುಗು ಸಹತ ಮಳೆಯಾಗುವ (Karnataka Weather) ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆ, ಬೆಳಗಾವಿ, ಬಾಗಲಕೋಟೆ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಭಾರಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ಜೂನ್ 14ರಂದು ದಕ್ಷಿಣ ಒಳನಾಡಿನ ಜಿಲ್ಲೆಗಳ ಮೇಲೆ ಹಲವು ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದೇ ರೀತಿಯ ಪರಿಸ್ಥಿತಿ ಜೂನ್ 16ರವರೆಗೆ ಇರಲಿದೆ ಎಂದು ಮಾಹಿತಿ ನೀಡಿದೆ.
ಮೀನುಗಾರರಿಗೆ ಎಚ್ಚರಿಕೆ
ಚಂಡಮಾರುತದ ಹವಾಮಾನವು ಗಂಟೆಗೆ 35 ಕಿ.ಮೀ ನಿಂದ 45 ಕಿ.ಮೀ ವೇಗದಲ್ಲಿ 55 ಕಿ.ಮೀ ವರೆಗೆ ಬೀಸುವ ಗಾಳಿಯೊಂದಿಗೆ ಕರ್ನಾಟಕ ಕರಾವಳಿಯ ಉದ್ದಕ್ಕೂ ಮತ್ತು ಹೊರಗೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ದಕ್ಷಿಣ ಕನ್ನಡ: ಮೂಲ್ಕಿಯಿಂದ ಮಂಗಳೂರಿನವರೆಗೆ ದಕ್ಷಿಣ ಕನ್ನಡ, ಕರ್ನಾಟಕ ಕರಾವಳಿಗೆ ಹೈ ವೇವ್ ಅಲರ್ಟ್ ಇದೆ. . ಜೂನ್ 12ರಿಂದ 13ರ ಬೆಳಗ್ಗೆ 11:30 ಗಂಟೆಗಳವರೆಗೆ 1.9 – 2.0 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳನ್ನು ಮುನ್ಸೂಚಿಸಲಾಗಿದೆ.
ಉಡುಪಿ: ಬೈಂದೂರಿನಿಂದ ಕಾಪುವರೆಗಿನ ಉಡುಪಿ, ಕರ್ನಾಟಕ ಕರಾವಳಿಯಲ್ಲಿ ಹೈ ವೇವ್ ಅಲರ್ಟ್ ಇದೆ. ಜೂನ್ 12ರಿಂದ 13ರ ಬೆಳಗ್ಗೆ 11:30ರವರೆಗೆ 1.9- 2.1 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳನ್ನು ಮುನ್ಸೂಚಿಸಲಾಗಿದೆ.
ಉತ್ತರ ಕನ್ನಡ: ಉತ್ತರ ಕನ್ನಡ, ಕರ್ನಾಟಕ ಕರಾವಳಿಯ ಮಾಜಾಳಿಯಿಂದ ಭಟ್ಕಳದವರೆಗೆ ಹೈ ವೇವ್ ಅಲರ್ಟ್ ನೀಡಲಾಗಿದೆ. ಜೂನ್ 12ರಿಂದ 13ರ ರಾತ್ರಿ 11.30ರವರೆ 2.0 – 2.1 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳನ್ನು ಮುನ್ಸೂಚಿಸಲಾಗಿದೆ. ತಕ್ಷಣ ಕ್ರಮ ಕೈಗೊಳ್ಳುವ ಅಗತ್ಯವಿಲ್ಲ ಎಂದು ಸಲಹೆ ನೀಡಲಾಗಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ
ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಅಕಾಶ. ಹಗುರದಿಂದ ಸಾಧಾರಣ ಮಳೆ, ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29ನೇC ಮತ್ತು 21c ಆಗಿರಬಹುದು.