ಬೆಂಗಳೂರು: ಮುಂದಿನ 3 ಗಂಟೆಯಲ್ಲಿ (ನ.8) ಬೆಳಗಾವಿ, ದಕ್ಷಿಣ ಕನ್ನಡ, ಶಿವಮೊಗ್ಗ ಹಾಗೂ ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ರಭಸವಾದ ಗಾಳಿಯೊಂದಿಗೆ ಮಳೆಯಾಗುವ (Rain News) ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (Karnataka Weather Forecast) ಎಚ್ಚರಿಸಿದೆ.
ಕರ್ನಾಟಕ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಬಹುತೇಕ ಕಡೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಇದೆ. ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಚದುರಿದಂತೆ ವ್ಯಾಪಕ ಮಳೆಯಾಗಲಿದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಕೊಪ್ಪಳ ಹಾಗೂ ಹಾವೇರಿ, ವಿಜಯನಗರ, ಬಾಗಲಕೋಟೆ, ರಾಯಚೂರು, ಗದಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಕಲಬುರಗಿ, ವಿಜಯಪುರ ಮತ್ತು ಯಾದಗಿರಿಯಲ್ಲಿ ಸಾಧಾರಣ ಮಳೆಯಾಗಹುದು. ಬೀದರ್ ಹಗುರದಿಂದ ಕೂಡಿದ ಮಳೆ ಸಾಧ್ಯತೆ ಇದೆ.
ಮಲೆನಾಡಿನ ಹಾಸನ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗದ ಪ್ರತ್ಯೇಕ ಕಡೆಗಳಲ್ಲಿ ಭರ್ಜರಿ ಮಳೆಯಾಗಬಹುದು. ಕರಾವಳಿಯ ಉತ್ತರ ಕನ್ನಡದಲ್ಲಿ ಭಾರಿ ಮಳೆಯಾದರೆ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಸಾಧಾರಣ ಮಳೆಯಾಗಬಹುದು.
ಇದನ್ನೂ ಓದಿ: Rain News : ಸೇತುವೆ ದಾಟುವಾಗ ಕೊಚ್ಚಿ ಹೋದ ಶಿಕ್ಷಕ! ಗೋಡೆ ಕುಸಿದು ವೃದ್ಧ ಸಾವು
8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಉತ್ತರ ಕನ್ನಡ, ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಮಂಡ್ಯ ಮತ್ತು ಮೈಸೂರಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ.
ಮೀನುಗಾರರಿಗೆ ಸೂಚನೆ
ಬುಧವಾರ ಉತ್ತರಕನ್ನಡ ಕರಾವಳಿಯಲ್ಲಿ ವರುಣನ ಆರ್ಭಟ ಜೋರಾಗಿದೆ. ಕರಾವಳಿ ತಾಲೂಕುಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುತ್ತಿದೆ. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲ್ಲೂಕಿನಲ್ಲಿ ಬೆಳಗ್ಗೆಯಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ನವೆಂಬರ್ 9ರ ವರೆಗೆ ಭಾರೀ ಮಳೆ ಮುನ್ಸೂಚನೆ ಇದ್ದು, ಮೀನುಗಾರಿಕೆಗೆ ತೆರಳದಂತೆ ಮೀನುಗಾರರಿಗೆ ಸೂಚನೆ ನೀಡಲಾಗಿದೆ.
ಮಳೆಗೆ ನೆಲಕಚ್ಚಿದ ಭತ್ತದ ಬೆಳೆ
ಯಾದಗಿರಿ ಜಿಲ್ಲೆಯಲ್ಲಿ ಭಾರಿ ಮಳೆಗೆ ನೂರಾರು ಎಕರೆ ಭತ್ತದ ಬೆಳೆ ನೆಲಕಚ್ಚಿದೆ. ಮಳೆ ಇಲ್ಲದೇ ಸಂಕಷ್ಟ ಅನುಭವಿಸಿದ್ದ ಅನ್ನದಾತನಿಗೆ, ಈಗ ಮಳೆಯಿಂದಲೇ ಅವಾಂತರವಾಗಿದೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಹಾಗೂ ಯಾಳಗಿಯಲ್ಲಿ ಭತ್ತಕ್ಕೆ ಹಾನಿಯಾಗಿದೆ. ಯಾಳಗಿ ಗ್ರಾಮದ ರಾಮನಗೌಡ ಎಂಬ ರೈತರ 30 ಎಕರೆ ಭತ್ತದ ಬೆಳೆ ಮಳೆಯಿಂದ ಹಾನಿಯಾಗಿದೆ. ಲಕ್ಷಾಂತರ ರೂ. ಖರ್ಚು ಮಾಡಿ ಭತ್ತದ ಬೆಳೆ ಬೆಳೆದಿದ್ದ ರೈತರಿಗೆ ಸಂಕಷ್ಟ ಎದುರಾಗಿದೆ.
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 29 ಡಿ.ಸೆ -20 ಡಿ.ಸೆ
ಮಂಗಳೂರು: 31 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 29 ಡಿ.ಸೆ – 20 ಡಿ.ಸೆ
ಗದಗ: 29ಡಿ.ಸೆ – 22 ಡಿ.ಸೆ
ಹೊನ್ನಾವರ: 33 ಡಿ.ಸೆ- 24 ಡಿ.ಸೆ
ಕಲಬುರಗಿ: 34 ಡಿ.ಸೆ – 22 ಡಿ.ಸೆ
ಬೆಳಗಾವಿ: 30 ಡಿ.ಸೆ – 20 ಡಿ.ಸೆ
ಕಾರವಾರ: 33 ಡಿ.ಸೆ – 25 ಡಿ.ಸೆ
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ