Site icon Vistara News

Karnataka Weather : ನಾಳೆ ಕೊಡಗು ಸೇರಿ 10 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ!

Karnataka Weather forecast

ಬೆಂಗಳೂರು: ರಾಜ್ಯಾದ್ಯಂತ ಹಲವೆಡೆ ಭಾರಿ ಮಳೆಯಾಗುವ (rain News) ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾದರೆ, ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.

ಭಾರಿ ಮಳೆ ಮುನ್ನೆಚ್ಚರಿಕೆ

ಮಲೆನಾಡಿನ ಕೊಡಗು ಜಿಲ್ಲೆಯಲ್ಲಿ ಅತಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲೂ ವ್ಯಾಪಕ ಮಳೆಯಾಗುವ ಎಚ್ಚರಿಕೆ ನೀಡಿದೆ. ಇತ್ತ ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Vistara Kannada Sambhrama : ವಿಸ್ತಾರ ಕನ್ನಡ ಸಂಭ್ರಮದಲ್ಲಿ ಹೇಗಿತ್ತು ಮನರಂಜನೆಯ ಸುಗ್ಗಿ; ಇಲ್ಲಿವೆ ಫೋಟೊ ಝಲಕ್‌

ಗುಡುಗು ಮುನ್ನೆಚ್ಚರಿಕೆ

ಮುಂದಿನ 48 ಗಂಟೆಯಲ್ಲಿ ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕಲಿದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ನ.3ರಂದು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು. ಭಾಗಮಂಡಲದಲ್ಲಿ 4, ಹಾರಂಗಿ, ಸಾಲಿಗ್ರಾಮದಲ್ಲಿ ತಲಾ 3, ಪುತ್ತೂರು, ಮಡಿಕೇರಿ, ಸರಗೂರಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ. ಮಂಗಳೂರು ವಿಮಾನ ನಿಲ್ದಾಣ, ಧರ್ಮಸ್ಥಳ, ಮೂರ್ನಾಡು, ನಾಪೋಕ್ಲು, ವಿರಾಜಪೇಟೆಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ಕಡಿಮೆ ಉಷ್ಣಾಂಶ 18.6 ಡಿ.ಸೆ. ವಿಜಯಪುರದಲ್ಲಿ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version