ಬೆಂಗಳೂರು: ತಮಿಳುನಾಡು ಮೂಲಕ ಕನ್ಯಾಕುಮಾರಿವರೆಗೆ ಸಮುದ್ರ ಮಟ್ಟದಲ್ಲಿ ಟ್ರಫ್ ಎದ್ದಿದೆ. ಇದರ ಪ್ರಭಾವದಿಂದಾಗಿ ಕರ್ನಾಟಕದಲ್ಲಿ ಅ. 10, 11 ರಂದು ಭರ್ಜರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಪ್ರಮುಖವಾಗಿ ದಕ್ಷಿಣ ಒಳನಾಡಲ್ಲಿ ಭಾರಿ ಮಳೆಯಾಗುವ (Karnataka weather Forecast) ಸಾಧ್ಯತೆ ಇದೆ.
ಚಾಮರಾಜನಗರ, ಕೊಡಗು, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ಕೋಲಾರ ಹಾಗೂ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರದಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಮತ್ತು ದಾವಣಗೆರೆಯಲ್ಲಿ ಸಾಧಾರಣ ಮಳೆಯಾಗಲಿದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಒಣ ಹವೆ ಮುಂದುವರಿಯಲಿದೆ. ಮಲೆನಾಡಿನ ಶಿವಮೊಗ್ಗ, ಹಾಸನ ಮತ್ತು ಕೊಡಗಿನಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯ ದಕ್ಷಿಣ ಕನ್ನಡದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಸಾಧಾರಣ ಮಳೆಯಾಗಲಿದೆ.
ಇದನ್ನೂ ಓದಿ: Ganesha Festival : ಗಣೇಶ ಮೆರವಣಿಗೆ ವೇಳೆ ಭೀಕರ ಕೊಲೆ; ಇನ್ನು ಶೋಭಾಯಾತ್ರೆಗೆ ಅವಕಾಶ ಇಲ್ಲ
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 29 ಡಿ.ಸೆ – 21 ಡಿ.ಸೆ
ಮಂಗಳೂರು: 30 ಡಿ.ಸೆ – 25 ಡಿ.ಸೆ
ಚಿತ್ರದುರ್ಗ: 33 ಡಿ.ಸೆ – 22 ಡಿ.ಸೆ
ಗದಗ: 34 ಡಿ.ಸೆ – 22 ಡಿ.ಸೆ
ಹೊನ್ನಾವರ: 32 ಡಿ.ಸೆ- 23 ಡಿ.ಸೆ
ಕಲಬುರಗಿ: 36 ಡಿ.ಸೆ – 23 ಡಿ.ಸೆ
ಬೆಳಗಾವಿ: 31 ಡಿ.ಸೆ – 21 ಡಿ.ಸೆ
ಕಾರವಾರ: 34 ಡಿ.ಸೆ – 25 ಡಿ.ಸೆ
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ